ನರೇಗಲ್: ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ರೋಣ ವ್ಯಾಪ್ತಿಯಲ್ಲಿ 2021-22ನೇ ಸಾಲಿನಲ್ಲಿ ಕೈಗೆತ್ತಿಕೊಂಡಿದ್ದ ಗ್ರಾಮೀಣ ರಸ್ತೆ ಕಳಪೆ ಕಾಮಗಾರಿ ಆರೋಪ ಕೇಳಿಬಂದಿದ್ದು, ಲೋಕಾಯುಕ್ತ ಸಂಸ್ಥೆಯ ಎಂಜಿನಿಯರ್ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸುಮಾರು ₹80 ಲಕ್ಷ ಅನುದಾನದಲ್ಲಿ ನರೇಗಲ್ನಿಂದ ತೊಂಡಿಹಾಳದವರೆಗೆ ರಸ್ತೆ ಅಭಿವೃದ್ಧಿ ಮಾಡಲಾಗಿದ್ದು, ಕಾಮಗಾರಿ ಗುಣಮಟ್ಟದ ಕಳಪೆಯಾಗಿದೆ ಎಂದು ಪಟ್ಟಣದ ನಿವಾಸಿ ಬಸವರಾಜ ಚಂದ್ರಶೇಖರ ಕಳಕೊಣ್ಣವರ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ ಆಧರಿಸಿ ಲೋಕಾಯುಕ್ತ ಇಲಾಖೆ ಕಾಮಗಾರಿ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಸ್ತೆ ನಿರ್ಮಿಸಿದ ಕೆಲವೇ ದಿನಗಳಲ್ಲಿ ಮತ್ತೆ ಹಾಳಾಗಿದ್ದು, ಹಲವೆಡೆ ಗುಂಡಿಗಳು ಬಿದ್ದು ಸಂಚಾರಕ್ಕೆ ತೊಂದರೆಯಾಗುತ್ತಿದೆ. ಮಳೆಗಾಲದಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು. ಈ ಪ್ರಕರಣದಲ್ಲಿ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-23-441511345

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.