ಗದಗ: ವಿದೇಶಿ ವಿನಿಮಯ ಕೊರತೆ ಆಗಬಾರದು ಮತ್ತು ದೇಶದ ಹಿತದೃಷ್ಟಿಯಿಂದ ಕೆಲ ಸಂಪನ್ಮೂಲಗಳ ಬಳಕೆಯಲ್ಲಿ ಮಿತವ್ಯಯ ಅನುಸರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಅದನ್ನೇ ದಿಕ್ಕು ತಪ್ಪಿಸುವ ರೀತಿಯಲ್ಲಿ ಕೇಂದ್ರದ ವಿಪಕ್ಷ ಕಾಂಗ್ರೆಸ್ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಶಾಸಕ ಸಿ.ಸಿ.ಪಾಟೀಲ ಹೇಳಿದರು.

ಗದಗ ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು, ಈ ಹಿಂದೆ ದೇಶದ ಹಿತ ಕಾಪಾಡುವ ದೃಷ್ಟಿಯಿಂದ 1967 ರಲ್ಲಿ ಇಂದಿರಾ ಗಾಂಧಿ ಅವರು ಕೂಡ ಇಂತಹದ್ದೇ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ಪ್ರಧಾನಿ ಆಗಿದ್ದ ಮನಮೋಹನ್ ಸಿಂಗ್, ವೀರಪ್ಪ ಮೊಯ್ಲಿ, ಕಪಿಲ್ ಸಿಬಲ್ ಅವರು ಹಲವು ಸಂದರ್ಭಗಳಲ್ಲಿ ತೈಲದ ಮಿತ ಬಳಕೆ ಕುರಿತು ಹೇಳಿಕೆ ನೀಡಿದ್ದರು ಎಂದರು.

ನಗರಸಭೆಯ ಬಿಜೆಪಿ ಮೂವರ ಸದಸ್ಯರ ಅನರ್ಹತೆ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಈಗ ಬಿಜೆಪಿ ಮೂವರು ಸದಸ್ಯರು ಅರ್ಹ ಸದಸ್ಯರಾಗಿದ್ದಾರೆ ಎಂಬುದು ವಿಶೇಷ. ರಾಜಕೀಯ ದುರುದ್ದೇಶದಿಂದ ಬಿಜೆಪಿ ಸದಸ್ಯರಿಗೆ ತೊಂದರೆ ಕೊಟ್ಟಿದ್ದಾರೆ ಎಂದರು.

ಜಿಲ್ಲಾಧಿಕಾರಿ ವಿರುದ್ದ ಅಸಮಾಧಾನ: ಗದಗ ಜಿಲ್ಲಾಧಿಕಾರಿ ಫೋನ್ ಬೆಳಗ್ಗೆ 10 ರಿಂದ 5 ರ ವರೆಗೆ ಮಾತ್ರ ಆನ್ ಆಗಿರುತ್ತದೆ. ಉಳಿದ ಸಮಯದಲ್ಲಿ ಸ್ವಿಚ್ ಆಫ್ ಆಗಿರುತ್ತದೆ. ಈ ಬಗ್ಗೆ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರ ಗಮನಕ್ಕೆ ತಂದಿದ್ದೇನೆ ಎಂದು ಸಿ.ಸಿ. ಪಾಟೀಲ ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಎಂ.ಎಂ.ಹಿರೇಮಠ, ಎಂ.ಎಸ್.ಕರೀಗೌಡ್ರ, ಉಷಾ ದಾಸರ, ನೀರ್ಮಲಾ ಕೊಳ್ಳಿ, ಲಿಂಗರಾಜ ಪಾಟೀಲ, ಪ್ರಶಾಂತ ನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-23-540590021

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.