ನರೇಗಲ್: ನೂರು ವರ್ಷಕ್ಕೂ ಹೆಚ್ಚಿನ ವರ್ಷಗಳಷ್ಟು ಇತಿಹಾಸ ಹೊಂದಿದ ನರೇಗಲ್ ಪಟ್ಟಣದ ದತ್ತಾತ್ರೇಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಸೋಮವಾರ ಬ್ರಹ್ಮ ಸಮಾಜದ ಹಿರಿಯ ವೈದ್ಯ ಡಾ.ಜಿ.ಕೆ. ಕಾಳೆ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

‘ನರೇಗಲ್ ಪಟ್ಟಣದಲ್ಲಿ ನಾಲ್ಕು ದಶಕಗಳ ಹಿಂದೆ ದತ್ತಾತ್ರೇಯ ದೇವಸ್ಥಾನವನ್ನು ಭಕ್ತರೆಲ್ಲರ ಸಹಕಾರದಿಂದ ನೂತನವಾಗಿ ನಿರ್ಮಿಸಲಾಗಿತ್ತು. ಆದರೆ ಈಗ ಮೇಲ್ಮಹಡಿಯು ಶಿಥಿಲಾವಸ್ಥೆಯನ್ನು ತಲುಪಿರುವುದರಿಂದ ಅದನ್ನು ಜೀರ್ಣೋದ್ಧಾರ ಮಾಡಲೇಬೇಕಾದ ಅನಿವಾರ್ಯತೆ ಇದೆ. ಅದಕ್ಕಾಗಿ ಭೂಮಿ ಪೂಜೆಯನ್ನು ನೆರವೇರಿಸಿದ್ದೇವೆ’ ಎಂದರು.

ಇದರೊಂದಿಗೆ ಶ್ರೀ ದತ್ತಾತ್ರೇಯ ಕಲ್ಯಾಣ ಮಂಟಪವನ್ನೂ ನಿರ್ಮಿಸುವ ಯೋಜನೆ ಇದೆ. ಇದಕ್ಕಾಗಿ ಅಂದಾಜು ₹1.50 ಕೋಟಿ ವೆಚ್ಚ ತಗುಲಲಿದ್ದು, ಭಕ್ತರು ಸಹಕಾರ ನೀಡಬೇಕೆಂದು ಕೋರಿದರು. ದತ್ತ ಭಕ್ತ ಮಂಡಳಿಯ ನಾಗರಾಜ ಗ್ರಾಮಪುರೋಹಿತ ಮಾತನಾಡಿದರು. ದತ್ತಾತ್ರೇಯ ದೇವಸ್ಥಾನದ ಅರ್ಚಕರಾದ ವಲ್ಲಭಭಟ್ಟ ಸದರಜೋಶಿ, ಆದರ್ಶ ಕುಲಕರ್ಣಿ, ಎ. ಜಿ. ಕುಲಕರ್ಣಿ, ಕಾರ್ಯದರ್ಶಿ ರಘುನಾಥ ಕೊಂಡಿ, ಅರುಣ ಗ್ರಾಮ ಪುರೋಹಿತ, ಅಜಿತ ಕುಲಕರ್ಣಿ, ನಿವೃತ್ತ ಮುಖ್ಯ ಶಿಕ್ಷಕ ಅರುಣ ಕುಲಕರ್ಣಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-23-1630227444

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.