ನರಗುಂದ: ‘ದೇಶದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ರಾಜ್ಯದಲ್ಲಿ ಅನುಷ್ಠಾನವಾಗಿಲ್ಲ. ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ಗೋಹತ್ಯೆ ತಡೆಯಬೇಕು’ ಎಂದು ವಕೀಲ ಆರ್.ಸಿ. ಪಾಟೀಲ ಆಗ್ರಹಿಸಿದರು.

ಪಟ್ಟಣದ ಮಿನಿ ವಿಧಾನಸೌಧದಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಆಶ್ರಯದಲ್ಲಿ ಮಂಗಳವಾರ ಈ ಕುರಿತು ತಹಶೀಲ್ದಾರ ಶ್ರೀಶೈಲ ತಳವಾರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

‘ಬಕ್ರೀದ್ ಆಚರಣೆಗೂ ಮೊದಲು ಸಾರ್ವಜನಿಕ ಪ್ರಕಟಣೆ ಹೊರಡಿಸಿ, ಅಕ್ರಮವಾಗಿ ಗೋಹತ್ಯೆ ನಡೆಯುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ನಗರ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಜಾನುವಾರು ಹತ್ಯೆ ನಡೆಯುವ ಶಂಕೆಯಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಅಂತಹ ಪ್ರಕರಣ ನಡೆಯುವ ಮೊದಲೇ ಪೊಲೀಸ್ ಇಲಾಖೆ ಎಚ್ಚರ ವಹಿಸಬೇಕು’ ಎಂದರು.

ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ ಅಪ್ಪೋಜಿ ಮಾತನಾಡಿ, ‘ಭಾರತವು ಗೋವು ಆಧಾರಿತ ನಾಡು. ಗೋವುಗಳನ್ನು ಪೂಜಿಸುವ ಏಕೈಕ ದೇಶ ಭಾರತ. ಇಂತಹ ದೇಶದಲ್ಲಿ ಗೋಹತ್ಯೆ ಮಾಡುವುದು ಅಕ್ಷಮ್ಯ ಅಪರಾಧ. ಸರ್ಕಾರ ಈ ಬಗ್ಗೆ ಎಚ್ಚರ ವಹಿಸಬೇಕು. ಗೋಹತ್ಯೆ ಕಂಡುಬಂದಲ್ಲಿ ಉಗ್ರ ಹೋರಾಟ ನಡೆಸಲಾಗುತ್ತದೆ’ ಎಂದರು.

ನಂದೀಶ ಮಠದ, ಸಂಗಪ್ಪ ಪೂಜಾರ ಮಾತನಾಡಿದರು. ಕೃಷ್ಣ ಮಹಾಲಿನಮನಿ, ಸಂಗಪ್ಪ ಪೂಜಾರ, ಮಹಾಂತೇಶ ಹಂಪಣ್ಣವರ, ನಿರಂಜನ ಮಡಿವಾಳರ, ಶ್ರೀನಿವಾಸಪ್ರಸಾದ ಗುಜಮಾಗಡಿ, ಸಚಿನ್ ಸಾಬಳೆ, ಎಚ್.ಪಿ. ಮುದ್ದನಗೌಡ್ರ, ಮಂಜು ನವಲಗುಂದ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-23-2035462104

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.