ನರಗುಂದ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಮಂಗಳವಾರ ಸಂಜೆ 7 ರಿಂದ.8 ರವರೆಗೆ ಒಂದು ಗಂಟೆಗಳ ಕಾಲ ಜೋರಾಗಿ ಮಳೆ ಸುರಿಯಿತು. ಇದರಿಂದ ಅತಿಯಾದ ಬಿಸಿಲ ಬೇಗೆಗೆ ತತ್ತರಿಸಿದ ಜನತೆ ನಿಟ್ಟುಸಿರು ಬಿಡುವಂತಾಯಿತು.

ಆದರೆ ಗುಡುಗು, ಗಾಳಿ ಸಹಿತ ಮಳೆ ಸುರಿದಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ಚರಂಡಿಗಳು ತುಂಬಿ ಹರಿದವು. ಅಲ್ಲಲ್ಲಿ ತಗ್ಗುಗಳಲ್ಲಿ ನೀರು ತುಂಬಿಕೊಂಡು ಸಂಚಾರಕ್ಕೆ ತೊಂದರೆ ಉಂಟಾಯಿತು.

ಮಳೆ ಗಾಳಿ ಪರಿಣಾಮ ಒಂದುವರೆ ಗಂಟೆಗೂ ಹೆಚ್ಚು ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿ ಇಡಿ ಪಟ್ಟಣ ಕತ್ತಲಿನಿಂದ ಕೂಡಿ ಜನರು ಪರದಾಡಿದ್ದು ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-23-181399519

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.