ನರಗುಂದ: 2025-26ನೇ ಸಾಲಿನ ಸರ್ಕಾರ ದ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿನ ಕಡಲೆ ಹುಟ್ಟುವಳಿ ಖರೀದಿ ಅವಧಿ ವಿಸ್ತರಣೆ ಮಾಡಬೇಕು ಎಂದು ಶಾಸಕ ಸಿ.ಸಿ.ಪಾಟೀಲ ಈಚೆಗೆ ಆಗ್ರಹಿಸಿದ್ದಾರೆ.

ಗದಗ ಜಿಲ್ಲೆಯಾದ್ಯಂತ 72 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಸದರಿ ಖರೀದಿ ಕೇಂದ್ರಗಳಲ್ಲಿ ಈವರೆಗೆ ಒಟ್ಟು 19,133 ಜನ ರೈತರು ನೋಂದಾಯಿಸಿಕೊಂಡಿದ್ದಾರೆ. ಅದರಲ್ಲಿ ಈವರೆಗೆ ಒಟ್ಟು 15,510 ಜನ ರೈತರು ಕಡಲೆ ಮಾರಾಟ ಮಾಡಿದ್ದಾರೆ. ಇನ್ನೂ 3623ರಷ್ಟು ರೈತರು ಕಡಲೆ ಹುಟ್ಟುವಳಿ ಮಾರಾಟ ಮಾಡಬೇಕಾಗಿದೆ. ಆದೇಶದಲ್ಲಿ ಸೂಚಿಸಿರುವ ಷರತ್ತುಗಳನ್ವಯ ಕಡಲೆ ನೋಂದಣಿ ಮತ್ತು ಖರೀದಿ 90 ದಿನಗಳವರೆಗೆ ಕಾಲಾವದಿ ನಿಗದಿಪಡಿಸಲಾಗಿತ್ತು. ಖಾಲಿ ಗೋಣಿ ಚೀಲ ಮತ್ತು ಕ್ಯೂ ಆರ್ ಕೋಡ್ ನಿಗದಿತ ಸಮಯಕ್ಕೆ ಬಾರದೇ ಇರುವುದರಿಂದ ಖರೀದಿ ವಿಳಂಬವಾಗಿದೆ. ಆದ್ದರಿಂದ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ರೈತರ ಹಿತದೃಷ್ಟಿಯಿಂದ ಈಗಾಗಲೇ ನೋಂದಣಿ ಆಗಿರುವ ರೈತರ ಕಡಲೆ ಖರೀದಿ ಕಾಲಾವಧಿ ವಿಸ್ತರಿಸಲು ಜಿಲ್ಲಾಧಿಕಾರಿಗಳ ಮೂಲಕ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಶಾಸಕ ಪಾಟೀಲ ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-23-634250408

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.