ನರಗುಂದ: ಶಾಲೆ, ಕಾಲೇಜು, ಧಾರ್ಮಿಕ ಸ್ಥಳಗಳು ಹಾಗೂ ಜನವಸತಿ ಪ್ರದೇಶಗಳ ಸಮೀಪ ನಡೆಸುತ್ತಿರುವ ಬಾರ್ ಮತ್ತು ಮದ್ಯದಂಗಡಿಗಳನ್ನು ತಕ್ಷಣ ಸ್ಥಳಾಂತರಿಸುವಂತೆ ನಮ್ಮ ಕರ್ನಾಟಕ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ರವಿ ಚಿಂತಾಲ ನೇತೃತ್ವದಲ್ಲಿ ಸೋಮವಾರ ಗದುಗಿನಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ರವಿ ಚಿಂತಾಲ ಮಾತನಾಡಿ, ‘ತಮಿಳುನಾಡಿನ ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ ಅಧಿಕಾರ ವಹಿಸಿಕೊಂಡ ತಕ್ಷಣ ಸಾರ್ವಜನಿಕ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳ ಸಮೀಪದಲ್ಲಿರುವ ಬಾರ್ ಹಾಗೂ ಮದ್ಯದಂಗಡಿಗಳನ್ನು ಸ್ಥಳಾಂತರಿಸುವ ಮಹತ್ವದ ಕ್ರಮ ಕೈಗೊಂಡಿರುವುದು ಪ್ರಶಂಸೆಗೆ ಪಾತ್ರವಾಗಿದೆ. ಇದೇ ರೀತಿ ಜನಪರ ಮತ್ತು ಕಠಿಣ ಕ್ರಮವನ್ನು ಕರ್ನಾಟಕದಲ್ಲಿ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಪ್ರಸ್ತುತ ಕರ್ನಾಟಕದ ಅನೇಕ ಗ್ರಾಮಗಳ ಮತ್ತು ಪ್ರದೇಶಗಳಲ್ಲಿ ಶಾಲೆ, ಕಾಲೇಜು, ದೇವಸ್ಥಾನ ಮಸೀದಿ, ಚರ್ಚ್, ಆಸ್ಪತ್ರೆ, ಬಸ್ ನಿಲ್ದಾಣ ಹಾಗೂ ಜನಸಂಚಾರ ಹೆಚ್ಚಿರುವ ಪ್ರದೇಶಗಳ ಪಕ್ಕದಲ್ಲಿ ಬಾರ್ ಮತ್ತು ಮದ್ಯದಂಗಡಿಗಳು ಕಾರ್ಯನಿರ್ವಹಿಸುತ್ತಿವೆ. ಇದರಿಂದ ಮಹಿಳೆಯರು, ವಿದ್ಯಾರ್ಥಿಗಳು ಹಿರಿಯ ನಾಗರಿಕರು ಹಾಗೂ ಮಕ್ಕಳು ಭಯ ಮತ್ತು ಕೆಟ್ಟ ವಾತಾವರಣದಲ್ಲಿ ಬದುಕುವಂತಾಗಿದೆ. ಕರ್ನಾಟಕ ಅಬಕಾರಿ ನಿಯಮಾವಳಿಗಳ ಪ್ರಕಾರ ಶಿಕ್ಷಣ ಸಂಸ್ಥೆಗಳು ಮತ್ತು ಧಾರ್ಮಿಕ ಸ್ಥಳಗಳಿಂದ ಕನಿಷ್ಠ 100 ಮೀ. ಅಂತರದಲ್ಲಿಯೇ ಮದ್ಯದಂಗಡಿಗಳಿಗೆ ಪರವಾನಗಿ ನೀಡಬೇಕು’ ಎಂದು ಒತ್ತಾಯಿಸಿದರು.

‘ಅನೇಕ ಕಡೆಗಳಲ್ಲಿ ಈ ನಿಯಮ ಮೀರಿ ಹೋಟೆಲ್, ತಂಪು ಪಾನೀಯ ಅಂಗಡಿ ಹಾಗೂ ಕಿರಾಣಿ, ಬೀಡಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುತ್ತಿರುವುದು ಸಾರ್ವಜನಿಕರಿಗೆ ಆತಂಕ ಉಂಟು ಮಾಡಿದೆ. ಆದ್ದರಿಂದ ಮದ್ಯದಂಗಡಿಗಳ ನಿಯಂತ್ರಣಕ್ಕೆ ಮುಂದಾಗಬೇಕು’ ಎಂದು ತಿಳಿಸಿದರು. ನಮ್ಮ ಕರ್ನಾಟಕ ಸೇನೆ ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-23-1954767507

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.