ನರಗುಂದ: ದಾದಿಯರ ಸೇವೆ ಆರೋಗ್ಯ ಇಲಾಖೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ದಿನದ 24 ಗಂಟೆಯೂ ಸೇವೆ ಸಲ್ಲಿಸುತ್ತಿರುವ ದಾದಿಯರ ಸೇವೆ ಈಶ್ವರನಿಗೆ ಸಮನಾದ ಸೇವೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಹಿರೇಮಠ ಹೇಳಿದರು.

ಪಟ್ಟಣದ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ಆಶ್ರಯದಲ್ಲಿ ಮಂಗಳವಾರ ನಡೆದ ವಿಶ್ವ ದಾದಿಯರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು.

ತಮ್ಮ ಆರೋಗ್ಯ ಲೆಕ್ಕಿಸದೆ ಜನರ ಆರೋಗ್ಯ ಸೇವೆಯನ್ನು ನಿರಂತರ ಮಾಡುತ್ತಿರುವ ದಾದಿಯರ ಕೈಂಕರ್ಯ ಶ್ಲಾಘನೀಯ ಎಂದರು.

ತಾಲ್ಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ. ಜಡೇಶ ಭದ್ರಗೌಡ, ಹಿರಿಯ ಶುಷ್ರೂಷಕಿ ಭಾರತಿ ಪಾಟೀಲ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಆರೋಗ್ಯ ಅಧಿಕಾರಿ ರೇಣುಕಾ ಕೊರವನವರ ಮಾತನಾಡಿ, ದಾದಿಯರಿಗೆ ಯಾವಾಗಲೂ ಗೌರವ ಸಲ್ಲಿಸಿ, ವಾತ್ಸಲ್ಯದಿಂದ ಕಾಣಬೇಕು ಎಂದರು.

ಉತ್ತಮ ಸೇವೆ ಸಲ್ಲಿಸದ 12 ಜನ ದಾದಿಯರಿಗೆ ಸನ್ಮಾನಿಸಲಾಯಿತು. ಪ್ರದೀಪ ಹಾಗೂ ಸುರೇಶ ಹಡಪದ ನಿರೂಪಿಸಿದರು. ಸರೋಜಿನಿ ಬಿರಾದಾರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-23-1936884275

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.