ನರಗುಂದ: ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ನಿರೀಕ್ಷೆಯಷ್ಟು ಮುಂಗಾರು ಮಳೆ ಸುರಿಯದ ಕಾರಣ ಇಲ್ಲಿನ ಬನ್ನಿ ಮಹಾಂಕಾಳಿ ಗುಡಿಯಲ್ಲಿ ಮಂಗಳವಾರ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಸುತ್ತಲಿನ ತಾಲ್ಲೂಕುಗಳಲ್ಲಿ ಉತ್ತಮವಾಗಿ ಮುಂಗಾರು ಮಳೆ ಸುರಿದರೂ, ನರಗುಂದ ಭಾಗದಲ್ಲಿ ಮಳೆ ಅಷ್ಟಾಗಿ ಆಗುತ್ತಿಲ್ಲ. ಇದರಿಂದಾಗಿ, ರೈತ ಸೇನಾ ಕರ್ನಾಟಕದ ಸದಸ್ಯರೊಂದಿಗೆ ರೈತರು, ಮಹದಾಯಿ ಧರಣಿ ವೇದಿಕೆ ಪಕ್ಕದಲ್ಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅಡುಗೆ ಸಿದ್ದಪಡಿಸಿ ನೈವೇದ್ಯ ಸಲ್ಲಿಸಿ, ನಂತರ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಸೇನಾದ ಮುಖಂಡ ವೀರಬಸಪ್ಪ ಹೂಗಾರ, ‘ಮುಂಗಾರು ಹಂಗಾಮು ಆರಂಭವಾದರೂ, ಈ ಭಾಗದಲ್ಲಿ ನಿರೀಕ್ಷೆಯಷ್ಟು ಮಳೆ ಸುರಿಯುತ್ತಿಲ್ಲ. ಇದರಿಂದ ಕೃಷಿ ಚಟುವಟಿಕೆಗಳು ತೊಡಕುಂಟಾಗಿದೆ’ ಎಂದರು.

ಎಸ್.ಬಿ. ಜೋಗಣ್ಣವರ, ಆರ್ಜುನ ಮಾನೆ, ಹನಮಂತ ಸರನಾಯ್ಕರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-23-1629531783

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.