ಬುಧವಾರ, ಅಕ್ಟೋಬರ್ 23, 2019
23 °C

ಈ.ಕೃಷ್ಣಪ್ಪಗೆ ‘ತೋಂಟದ ಶ್ರೀ’ ರಾಷ್ಟ್ರೀಯ ಪ್ರಶಸ್ತಿ

Published:
Updated:

ಗದಗ: ‘ಲಿಂಗೈಕ್ಯ ತೋಂಟದ ಸಿದ್ಧಲಿಂಗ ಶ್ರೀಗಳ ಸ್ಮರಣಾರ್ಥ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಬೆಂಗಳೂರಿನ ಬಸವ ವಾಹಿನಿ ಮಾಲೀಕ ಈ.ಕೃಷ್ಣಪ್ಪ ಅವರು ಆಯ್ಕೆಯಾಗಿದ್ದು, ಅ.9ರಂದು ಗದುಗಿನಲ್ಲಿ ನಡೆಯುವ ಶ್ರೀಗಳ ಪ್ರಥಮ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಮಠದ ಆಡಳಿತಾಧಿಕಾರಿ ಎಸ್‌.ಎಸ್‌ ಪಟ್ಟಣಶೆಟ್ಟಿ ಹೇಳಿದರು. 

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತಿ ವರ್ಷ ವಿಜಯದಶಮಿಯಂದು ಬಸವ ತತ್ವ ಸಾಧಕರಿಗೆ ₹5 ಲಕ್ಷ ಮೊತ್ತದ  ‘ಸಿದ್ಧಲಿಂಗ ಶ್ರೀ’ ಪ್ರಶಸ್ತಿ ನೀಡಲಾಗುವುದು. ರಾಜ್ಯ ಸರ್ಕಾರ 2009ರಲ್ಲಿ ಶ್ರೀಗಳಿಗೆ ನೀಡಿದ್ದ ರಾಷ್ಟ್ರೀಯ ಬಸವ ಪುರಸ್ಕಾರದ ಪ್ರಶಸ್ತಿ ಮೊತ್ತವಾದ ₹10 ಲಕ್ಷವನ್ನು ಈ ಪ್ರಶಸ್ತಿ ನಿಧಿಗೆ ವರ್ಗಾಯಿಸಲಾಗಿದೆ’ ಎಂದರು.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡುವರು. ಸಚಿವರಾದ ಬಸವರಾಜ ಬೊಮ್ಮಾಯಿ, ಬಿ.ಶ್ರೀರಾಮುಲು ಭಾಗವಹಿಸುವರು ಎಂದು ಹೇಳಿದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)