ಗದಗ: ‘ಪ್ರಸ್ತುತ ದಿನಗಳಲ್ಲಿ ಸಾಂವಿಧಾನಿಕ ಮೌಲ್ಯಗಳು ಕುಸಿಯುತ್ತಿರುವುದು ಆತಂಕಕಾರಿ ಬೆಳವಣಿಗೆ’ ಎಂದು ಪ್ರೊ. ಪ್ರಭುರಾಜ ನಾಯಕ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಯುವಜನರು ಸಾಂವಿಧಾನಿಕ ಮೌಲ್ಯಗಳನ್ನು ಉಳಿಸುವುದರ ಜತೆಗೆ ಸಂವಿಧಾನವನ್ನು ಬಲಪಡಿಸುವ ಸಂಕಲ್ಪ ಮಾಡಬೇಕು’ ಎಂದು ಹೇಳಿದರು.

‘ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವವರು ಕಡ್ಡಾಯವಾಗಿ ಸಂವಿಧಾನವನ್ನು ಸಂಪೂರ್ಣವಾಗಿ ಅಧ್ಯಯನ ಮಾಡಬೇಕು. ಇದರಿಂದ ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗಲಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಪ್ರೊ. ಎ.ಕೆ.ಜಮಾದಾರ ಮಾತನಾಡಿ, ‘ವಿದ್ಯಾರ್ಥಿಗಳು ವಿಶೇಷ ಉಪನ್ಯಾಸದ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಮೆಹಬೂಬ್ ಆರೀಫ್, ಪ್ರೊ. ಪ್ರಕಾಶ ಕರಿಗಾರ, ಪ್ರೊ. ಎಸ್.ಯು.ಸಜ್ಜನಶೆಟ್ಟರ, ಪ್ರೊ. ತೇಜಸ್ವಿನಿ, ನಾಗಪ್ಪ ಸುರಳಿಕೆರೆ, ಗ್ರಂಥಪಾಲಕ ಗುಂಡಪ್ಪ ನಾಯಕ, ಕಾರ್ಯಕ್ರಮದ ಸಂಯೋಜಕ ನವೀನ ಮರಿಗೌಡರ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಮಲ್ಲಿಕಸಾಬ್ ಮತ್ತು ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.

ಸುಜಾತಾ ನಿರೂಪಿಸಿದರು. ಮೇಟಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.