ಮುಂಡರಗಿ: ‘ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಗ್ರಾಮೀಣ ಭಾಗದ ಎಲ್ಲ ಕೂಲಿ ಕಾರ್ಮಿಕರಿಗೆ ನಿಯಮಿತವಾಗಿ ಉದ್ಯೋಗ ನೀಡಬೇಕು. ಅಗತ್ಯಕ್ಕೆ ತಕ್ಕಂತೆ ಕೂಲಿ ದಿನಗಳ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು' ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್.ಮುಂಡರಗಿ ಸೂಚಿಸಿದರು.

ಇಲ್ಲಿಯ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ನರೇಗಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ನರೇಗಾ ಕೂಲಿ ಕಾರ್ಮಿಕರ ಇ-ಕೆವೈಸಿ ಪ್ರಕ್ರಿಯೆ, ಕಾಮಗಾರಿಗಳ ಪೂರ್ಣಗೊಳಿಸುವಿಕೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು. ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ಮಾತನಾಡಿ, ತಾಲ್ಲೂಕಿನ ಪ್ರತಿಯೊಂದು ಗ್ರಾಮ ಪಂಚಾಯಿತಿಯ ಮಾಹಿತಿಯನ್ನು ಪ್ರತ್ಯೇಕವಾಗಿ ಸಲ್ಲಿಸಬೇಕು. ಕೂಲಿ ಕಾರ್ಮಿಕರ ಹಾಜರಾತಿ, ಅವರು ಮಾಡಿರುವ ಕೆಲಸ ಮೊದಲಾದವುಗಳ ನಿಖರ ಮಾಹಿತಿಯನ್ನು ಸಕಾಲದಲ್ಲಿ ಸಲ್ಲಿಸಬೇಕು ಎಂದು ಅವರು ತಿಳಿಸಿದರು.

ವಿವಿಧ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸಾಮಾಜಿಕ ಲೆಕ್ಕಪರಿಶೋಧನೆ ಪ್ರಕರಣಗಳ ವಸೂಲಾತಿ, ಯುಕ್ತಧಾರ ಯೋಜನೆ, ನರೇಗಾ ಕೂಲಿಕಾರರ ಫೇಸ್ ಅಥೆಂಟಿಕೇಶನ್ ಹಾಗೂ ಒಗ್ಗೂಡಿಸುವಿಕೆಯಡಿ ಕಾಮಗಾರಿಗಳ ಮುಕ್ತಾಯ ಮೊದಲಾದವುಗಳ ಕುರಿತು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಲಾಯಿತು.

ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ವಿಜಯಕುಮಾರ ಬೆಣ್ಣೆ ಮಾತನಾಡಿದರು.

ಸಹಾಯಕ ನಿರ್ದೇಶಕ ಪ್ರವೀಣ ಗೋಣೆಮ್ಮನವರ, ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ಪಿಡಿಒ, ಸಿಬ್ಬಂದಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-23-166871348

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.