ರೋಣ: ತಾಲ್ಲೂಕಿನ ಸವಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನಾಪೂರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿಯಲ್ಲಿ ನಡೆಯುತ್ತಿರುವ ಸಾಮೂಹಿಕ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ಕಾಮಗಾರಿ ಸ್ಥಳದಲ್ಲಿ ಕೆಲಸದ ಪ್ರಗತಿ, ಗುಣಮಟ್ಟ ಹಾಗೂ ಕೂಲಿಕಾರರಿಗೆ ಕಲ್ಪಿಸಲಾಗುತ್ತಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿ ಅನುಸಾರ ಕೂಲಿಕಾರರು ಕಡ್ಡಾಯವಾಗಿ ಅಳತೆಗೆ ತಕ್ಕಂತೆ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು.

ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ದೃಷ್ಟಿಯಿಂದ ಎಲ್ಲರೂ ಬೆಳಿಗ್ಗೆ ಬೇಗ ಕೆಲಸಕ್ಕೆ ಹಾಜರಾಗಿ ಮಧ್ಯಾಹ್ನದೊಳಗೆ ಕೆಲಸ ಮುಗಿಸಿಕೊಳ್ಳುವಂತೆ ಸಲಹೆ ನೀಡಿದರು.ಈ ವೇಳೆ ಕೂಲಿಕಾರರು ಗ್ರಾಮದಲ್ಲಿ ನಿರಂತರವಾಗಿ ನರೇಗಾ ಕಾಮಗಾರಿಗಳನ್ನು ಆರಂಭಿಸಿ ಉದ್ಯೋಗಾವಕಾಶ ಕಲ್ಪಿಸುವಂತೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅವರು, ಗುಣಮಟ್ಟದ ಹಾಗೂ ನಿಯಮಾನುಸಾರ ಕೆಲಸ ಮಾಡಿದಲ್ಲಿ ನಿರಂತರವಾಗಿ ಕೆಲಸ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಪರಿಶೀಲನೆ ಸಂದರ್ಭದಲ್ಲಿ ಕೂಲಿಕಾರರು ಹಾಗೂ ಸಿಬ್ಬಂದಿಗೆ ಹಲವು ಪ್ರಮುಖ ಸೂಚನೆಗಳನ್ನು ನೀಡಲಾಯಿತು. ಪ್ರತಿದಿನ ಕಡ್ಡಾಯವಾಗಿ ಎರಡು ಬಾರಿ ಎನ್ಎಂಎಂಎಸ್ಆ್ಯ ಪ್ ಮೂಲಕ ಹಾಜರಾತಿ ದಾಖಲಿಸಬೇಕು ಎಂದು ತಿಳಿಸಲಾಯಿತು. ಕಾಯಕ ಬಂಧುಗಳು ತಮ್ಮ ವ್ಯಾಪ್ತಿಯ ಕೂಲಿಕಾರರಿಗೆ ಪ್ರತಿದಿನ ಕೆಲಸದ ಅಳತೆಯ ಕುರಿತು ಮಾಹಿತಿ ನೀಡಿ, ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸಲು ಮಾರ್ಗದರ್ಶನ ನೀಡುವಂತೆ ಸೂಚಿಸಲಾಯಿತು. ಎನ್ಎಂಆರ್ ತೆಗೆದುಕೊಂಡ ಕೂಲಿಕಾರರು ಕಡ್ಡಾಯವಾಗಿ ಕಾಮಗಾರಿ ಸ್ಥಳಕ್ಕೆ ಹಾಜರಾಗಿ ಕೆಲಸ ನಿರ್ವಹಿಸಬೇಕು ಎಂದು ಅಧಿಕಾರಿಗಳು ಸೂಚಿಸಿದರು.

ನರೇಗಾ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಬದು ನಿರ್ಮಾಣ ಕಾಮಗಾರಿಗಳು ಗ್ರಾಮೀಣ ಭಾಗದಲ್ಲಿ ನೀರು ಸಂರಕ್ಷಣೆ, ಮಣ್ಣಿನ ಸದ್ಬಳಕೆ ಹಾಗೂ ರೈತರ ಭೂಮಿಯ ಅಭಿವೃದ್ಧಿಗೆ ಸಹಕಾರಿಯಾಗುತ್ತಿದ್ದು, ಗ್ರಾಮಾಭಿವೃದ್ಧಿಗೆ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ತಿಳಿಸಿದರು. ಪಿಡಿಒ, ಟಿಐಇಸಿ, ಡಿಇಓ, ಜಿಕೆಎಂ , ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-23-406118300

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.