ಶಿರಹಟ್ಟಿ: ‘ರಾಷ್ಟ್ರ ಪ್ರೇಮ, ಸೇವಾ ಭಾವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಲು, ಸಮುದಾಯದ ಅಗತ್ಯತೆ ಪೂರೈಸಲು ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಸಹಕಾರಿಯಾಗಿದೆ’ ಎಂದು ತಹಶೀಲ್ದಾರ್ ಕೆ. ರಾಘವೇಂದ್ರರಾವ್ ಹೇಳಿದರು.

ತಾಲ್ಲೂಕಿನ ಮಾಗಡಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಮಾತನಾಡಿದರು.

‘ಪ್ರತಿಯೊಬ್ಬ ವಿದ್ಯಾರ್ಥಿಯೂ ಗ್ರಾಮಗಳಲ್ಲಿನ ಸಮಸ್ಯೆಗಳನ್ನು ಗುರುತಿಸಿ, ಪರಿಹರಿಸಲು ಯತ್ನಿಸಬೇಕು. ಆರೋಗ್ಯ, ಶಿಕ್ಷಣ, ಸ್ವಚ್ಛತೆ ಮತ್ತು ಸಾಮಾಜಿಕ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳಬೇಕು’ ಎಂದರು.

‘ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ಹೋಗಲಾಡಿಸುವ ದಿಸೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಇಂತಹ ಅನಿಷ್ಟ ಪದ್ದತಿ ಕಂಡು ಬಂದ ತಕ್ಷಣ ಅಧಿಕಾರಿಗಳ ಗಮನಕ್ಕೆ ತರಬೇಕು’ ಎಂದು ಹೇಳಿದರು.

ಬೀಟ್ ಅಧಿಕಾರಿ ಡಿ. ಮೋಹಿಸಿನ್ ಅವರು ಮಾಗಡಿ ಕೆರೆಯ ಪಕ್ಷಿಗಳ ವಲಸೆ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು.

ಪ್ರಾಚಾರ್ಯ ಬಿ.ಜಿ. ಗಿರಿತಿಮ್ಮಣ್ಣವರ್ ಅಧ್ಯಕ್ಷತೆ ವಹಿಸಿದ್ದರು. ಡಿವೈಆರ್ಎಫ್ಒ ಎಸ್.ಎಂ. ಲಮಾಣಿ ಇದ್ದರು. ಕಾರ್ಯಕ್ರಮಾಧಿಕಾರಿ ಲಿಂಗರಾಜ ಯತ್ನಳ್ಳಿ ಸ್ವಾಗತಿಸಿದರು. ಗಿರೀಶ್ ರಡ್ಡೇರ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.