ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶ್ವರಪ್ಪ ಬಂಧನ ಅಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದು: ಸಿಎಂ ಬೊಮ್ಮಾಯಿ

Last Updated 15 ಏಪ್ರಿಲ್ 2022, 7:28 IST
ಅಕ್ಷರ ಗಾತ್ರ

ಗದಗ: ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸಬೇಕೇ ಬೇಡೆವೇ ಎಂಬುದನ್ನು ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ತೀರ್ಮಾನಿಸುತ್ತಾರೆ ಎಂದು ಮುಖ್ಯಮಂತ್ರಿ‌ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗದಗ ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ಕೆ.ಎಸ್.ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎರಡು ದಿನಗಳ ಹಿಂದೆಯೇ ರಾಜೀನಾಮೆ ಬಗ್ಗೆ ತೀರ್ಮಾನಿಸಿದ್ದರು. ಹಿರಿಯರ ಸಲಹೆಯಂತೆ ರಾಜೀನಾಮೆ ಕೊಟ್ಟಿಲ್ಲ. ಪಕ್ಷಕ್ಕೆ ಮುಜುಗರ ಆಗಬಾರದು ಅನ್ನೋ ಕಾರಣಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದರು.

ಕೆ.ಎಸ್ ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂಬ ಕಾಂಗ್ರೆಸ್ ನಾಯಕರ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಅವರು, ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಕೇಸ್ನಲ್ಲೂ ಜಾರ್ಜ್‌ ಅವರನ್ನು ಬಂಧಿಸಿರಲಿಲ್ಲ. ಕರ್ನಾಟಕ ಪೊಲೀಸರು ತನಿಖೆ ಮಾಡುವಾಗ ಮತ್ತು ಪ್ರಕರಣ ಸಿಬಿಐಗೆ ವರ್ಗಾವಣೆಯಾದಾಗಲೂ ಅವರ ಬಂಧನ ಆಗಲಿಲ್ಲ. ಇಂತಹ ಕಾಂಗ್ರೆಸ್ ನಾಯಕರಿಗೆ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಲು ಯಾವ ನೈತಿಕ ಹಕ್ಕಿದೆ ಎಂದು ಪ್ರಶ್ನಿಸಿದರು.

ನೈತಿಕ ಹೊಣೆ ಹೊತ್ತು ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಪ್ರಕರಣದ ತನಿಖೆ ಆಗಿ ಸತ್ಯಾಂಶ ಹೊರಬರುವವರೆಗೆ ಸುಮ್ಮನಿರಬೇಕು ಎಂದು ಹೇಳಿದರು.

ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ ಪರಿಹಾರ ಹಾಗೂ ಪತ್ನಿನಿಗೆ ಸರ್ಕಾರಿ ನೌಕರಿ ವಿಚಾರದ ಬಗ್ಗೆ ಬೆಂಗಳೂರಿಗೆ ಹೋದ ನಂತರ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT