ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ’

Published 9 ಫೆಬ್ರುವರಿ 2024, 15:54 IST
Last Updated 9 ಫೆಬ್ರುವರಿ 2024, 15:54 IST
ಅಕ್ಷರ ಗಾತ್ರ

ನರೇಗಲ್:‌ ಸರ್ವ ಶ್ರೇಷ್ಠ ಭಾರತಕ್ಕಾಗಿ ಮೊತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಜನತೆ ಮುಂದಾಗಬೇಕು. ಈ ಕುರಿತು ಕಾರ್ಯಕ್ರತರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶ್ರಮಿಸಬೇಕು ಎಂದು ರೋಣ ಮಂಡಲ ಬಿಜೆಪಿ ಅಧ್ಯಕ್ಷ ಮುತ್ತಣ್ಣ ತೋಟಪ್ಪ ಕಡಗದ ಹೇಳಿದರು.

ಸಮೀಪದ ಅಬ್ಬಿಗೇರಿ ಗ್ರಾಮದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಶುಕ್ರವಾರ ನಡೆದ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

2024ರ ಲೋಕಸಭಾ ಚುನಾವಣೆ ಈ ದೇಶದ ಭವಿಷ್ಯ ನಿರ್ಧರಿಸುತ್ತದೆ. ನಮ್ಮ ಗುರಿ ಮಾತ್ರ ನರೇಂದ್ರ ಮೋದಿ ಅವರನ್ನು ಗೆಲ್ಲಿಸುವುದು ಆಗಿರಲಿ. ಪ್ರತಿಯೊಬ್ಬ ಕಾರ್ಯಕರ್ತನು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಅದಕ್ಕಾಗಿ ಎಂ.ಪಿ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ತಪ್ಪದೆ ಮತನೀಡುವಂತೆ ಮನೆಮನೆಗೆ ಹೋಗಿ ಕೋರಬೇಕು ಎಂದು ಹೇಳಿದರು.

ಈ ಗ್ರಾಮ ಚಲೋ ಅಭಿಯಾನದ ಮೂಲಕ ಬಿಜೆಪಿ ಕಾರ್ಯಕರ್ತರು ಎಲ್ಲ ಗ್ರಾಮಗಳ ಮನೆ ಮನೆಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಡುವ ಕೆಲಸವನ್ನು ಮಾಡಬೇಕು ಜತೆಗೆ 2047 ರ ಹೊತ್ತಿಗೆ ವಿಕಸಿತ ಭಾರತ ಸಂಕಲ್ಪದ ಬದ್ಧತೆಯನ್ನು ಜನರಿಗೆ ವಿವರಿಸಬೇಕು ಹೇಳಿದರು

ಈ ವೇಳೆ ಸುರೇಶ ನಾಯ್ಕರ, ಭೀಮಪ್ಪ ಹನಮನಾಳ, ಪ್ರಕಾಶ ನಾಯ್ಕರ, ಸಂಗಪ್ಪ ಹಳ್ಳಿ, ಶಿವುಕುಮಾರ ಪಾಟೀಲ, ದೇವಪ್ಪ ಜಂತ್ಲಿ, ರವಿ ಯತ್ನಟ್ಟಿ, ತಿಪ್ಪಣ್ಣ ತಲ್ಲೂರ, ಮುತ್ತಣ್ಣ ಹೊಸಮನಿ, ಅಪ್ಪಣ್ಣ ಬಂಡಿ, ಗಿರೀಶ ಚಿಗರಿ, ಶಂಕರ ಇಟಗಿ, ಯಲ್ಲಪ್ಪ ಹಿರೇಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT