ಶುಕ್ರವಾರ, ಮೇ 20, 2022
23 °C
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ

ಸ್ಪರ್ಧೆಗೆ ಒಡ್ಡಿಕೊಳ್ಳುವುದು ಅನಿವಾರ್ಯ: ಸತ್ಯನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗದಗ: ‘ಸರ್ಕಾರ ಈಗ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಭೌತಿಕ ಸೌಲಭ್ಯಗಳನ್ನು ಒದಗಿಸುತ್ತಿದೆ. ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಆ ಕಾಲೇಜಿನ ಆಂತರಿಕ ಗುಣಮಟ್ಟವನ್ನು ಹೆಚ್ಚಿಸದಿದ್ದರೆ ಸೌಲಭ್ಯಗಳು ವ್ಯರ್ಥವಾದಂತೆ’ ಎಂದು ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ. ಸತ್ಯನಾರಾಯಣ ಸಿ.ಎನ್. ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಐಕ್ಯುಎಸಿ ಅಡಿಯಲ್ಲಿ ಗುರುವಾರ ನಡೆದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

‘ವಿದ್ಯಾರ್ಥಿಗಳು ಒಂದು ಕಾಲೇಜಿಗೆ ಪ್ರವೇಶ ಪಡೆಯುವ ಮುನ್ನ ಆ ಕಾಲೇಜಿಗೆ ನ್ಯಾಕ್ ನೀಡಿರುವ ಶ್ರೇಣಿಯನ್ನು ನೋಡುವ ಹಂತದಲ್ಲಿ ಇಂದು ನಾವಿದ್ದೇವೆ. ಸ್ಪರ್ಧೆ ಪ್ರತಿಯೊಂದು ಕ್ಷೇತ್ರವನ್ನು ಆವರಿಸಿಕೊಂದ್ದು ಸಂಸ್ಥೆಯಾಗಲೀ, ವ್ಯಕ್ತಿಯಾಗಲೀ ಸ್ಪರ್ಧೆಗೆ ಒಡ್ಡಿಕೊಳ್ಳದೇ ಹೋದರೆ ಅಪ್ರಸ್ತುತವಾಗುತ್ತೇವೆ. ಆದ್ದರಿಂದ ಪ್ರಾಧ್ಯಾಪಕರು, ಐಕ್ಯುಎಸಿ ಸೆಲ್ ಒಟ್ಟಾಗಿ ಕಾರ್ಯನಿರ್ವಹಿಸಬೇಕು’ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಎಸ್.ಎಫ್. ಸಿದ್ನೇಕೊಪ್ಪ ಮಾತನಾಡಿ, ‘ಕಾಲೇಜಿನ ಮುಖ್ಯ ಗಮನ ವಿದ್ಯಾರ್ಥಿಗಳೇ. ಅವರ ಸಮಗ್ರ ವ್ಯಕ್ತಿತ್ವ ವಿಕಸನಕ್ಕಾಗಿ ಸರ್ಕಾರ ನಿರಂತರವಾಗಿ ಅನೇಕ ಯೋಜನೆಗಳು ಹಾಗೂ ಸವಲತ್ತುಗಳನ್ನು ನೀಡುತ್ತಾ ಬಂದಿದೆ. ಅವುಗಳನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ನೀಡುವ ಹೊಣೆಗಾರಿಕೆ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಜತೆಗೆ ಸ್ಪರ್ಧೆ ಮಾಡುವ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ಹೇಳಿದರು.

ಕಾಲೇಜಿನ ಐಕ್ಯುಎಸಿ ಸಂಯೋಜಕ ಡಾ. ಇಂಗಲಗೊಂಡಿ ಪಿ.ಕೆ. ಮಾತನಾಡಿದರು. ಕಾಲೇಜು ಶಿಕ್ಷಣ ಇಲಾಖೆ ಸಹಾಯಕ ನಿರ್ದೇಶಕ ಎಸ್.ಆರ್.ಭಜಂತ್ರಿ, ಸಂಯೋಜಕ ಡಾ. ಉಮೇಶ ಅರಹುಣಸಿ, ಡಾ. ಆರ್.ಎಂ.ಕಲ್ಲನಗೌಡರ, ಡಾ. ಅಪ್ಪಣ್ಣ ಎನ್. ಹಂಜೆ, ಪ್ರೊ. ಎಸ್.ಎಲ್. ಗುಳೇದಗುಡ್ಡ ಇದ್ದರು.

ನ್ಯಾಕ್ ಸಮನ್ವಯ ಅಧಿಕಾರಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಪ್ರೊ. ಸುಧಾ ಹೆಗಡೆ, ಪ್ರೊ. ಅಫತಾಬ ಭಾಯಿ ತರಬೇತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು