ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಿಕ್ಷಣದಿಂದ ಮುಖ್ಯವಾಹಿನಿಗೆ’

ಅಂಬೇಡ್ಕರ್, ಬಾಬು ಜಗಜೀವನ್‌ ರಾಂ ಜಯಂತಿ
Last Updated 22 ಏಪ್ರಿಲ್ 2022, 4:47 IST
ಅಕ್ಷರ ಗಾತ್ರ

ಶಿರಹಟ್ಟಿ: ಪರಿಶಿಷ್ಟ ಸಮುದಾಯ ಶಿಕ್ಷಣ ಪಡೆದು ಪರಿವರ್ತನೆಗೊಂಡಾಗ ಮಾತ್ರ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಜಾತ ದೊಡ್ಡಮನಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಮಾಗಡಿ ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್‌ ರಾಂ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜವು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿ ಸಬಲತೆ ಪಡೆಯಬೇಕಿದ್ದು, ಇದೆಲ್ಲಾ ಶಿಕ್ಷಣದಿಂದ ಮಾತ್ರ ಸಾಧ್ಯ. ಆದ್ದರಿಂದ ಸಮಾಜದ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಪಾಲಕರು ಜಾಗೃತಿ ವಹಿಸಬೇಕು. ಮಕ್ಕಳು ಉತ್ತಮ ಶಿಕ್ಷಣ ಹಾಗೂ ಸಂಸ್ಕೃತಿಯೊಂದಿಗೆ ತಮ್ಮ ಜೀವನ ರೂಪಿಸಿಕೊಂಡು ಅಂಬೇಡ್ಕರ್ ಹಾಗೂ ಜಗಜೀವನ್‌ರಾಂ ಅವರ ತತ್ವಾದರ್ಶ ಪಾಲಿಸುವಂತಾಗಬೇಕು ಹೇಳಿದರು.

ಬಿಜೆಪಿ ಮುಖಂಡ ಗುರುನಾಥ ದಾನಪ್ಪನವರ ಮಾತನಾಡಿ, ದಲಿತ ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರ ಸದುಪಯೋಗವನ್ನು ಸಮಾಜದ ಪ್ರತಿಯೊಬ್ಬ‌ ವ್ಯಕ್ತಿ ಪಡೆದುಕೊಳ್ಳಬೇಕು. ಹಿರಿಯರ ಮಾರ್ಗದರ್ಶನದಲ್ಲಿ ಯುವ ಸಮೂಹ ಜಾಗೃತಿ ಹೊಂದಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು. ಮುಖಂಡರಾದ ಫಕ್ಕಿರೇಶ ಮ್ಯಾಟಣ್ಣವರ, ಮುತ್ತು ಭಾವಿಮನಿ, ಲೊಕೇಶ ದೊಡ್ಡಮನಿ, ಸುರೇಶ ನಂದೇಣ್ಣವರ, ಫಕ್ಕಿರೇಶ ನಡುವಿನಕೇರಿ, ಸುರೇಶ ಬೀರಣ್ಣವರ, ಫಕ್ಕಿರೇಶ ಮ್ಯಾಗೇರಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT