

ಬಯಲು ಬಹಿರ್ದೆಸೆಯಿಂದ ಆಮಶಂಕೆ ಕಾಮಾಲೆ ವಾಂತಿ ಭೇದಿ ಸೇರಿದಂತೆ ಎಂಟು ಬಗೆಯ ಕಾಯಿಲೆಗಳು ಬಾಧಿಸುವ ಸಾಧ್ಯತೆ ಇದ್ದು ಇಂತಹ ಪ್ರಕರಣಗಳು ಹೆಚ್ಚಾಗಿ ಮಕ್ಕಳಲ್ಲಿಯೇ ಕಂಡುಬರುತ್ತವೆ. ವಿಶೇಷವಾಗಿ ಜಂತುಹುಳು ಸೋಂಕು ಹೆಚ್ಚಾಗಿ ಕಂಡುಬರುವ ಸಾಧ್ಯತೆ ಇದೆ. ಇದರಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಕಂಡುಬರುತ್ತದೆ. ಜಂತುಹುಳು ನಿವಾರಣೆಗೆ ರಾಷ್ಟ್ರೀಯ ಕಾರ್ಯಕ್ರಮ ರೂಪಿಸಿಲಾಗಿದ್ದರೂ ಬಯಲು ಬಹಿರ್ದೆಸೆಯಿಂದ ಅದನ್ನು ನಿವಾರಿಸಲು ಸಾಧ್ಯವಾಗುತ್ತಿಲ್ಲಬಿ.ಎಸ್.ಭಜಂತ್ರಿ ತಾಲ್ಲೂಕು ಆರೋಗ್ಯ ಅಧಿಕಾರಿ ರೋಣ
ಸ್ವಚ್ಛತೆ ಕಾಪಾಡಿಕೊಳ್ಳಲು ಸರ್ಕಾರ ಎಷ್ಟೇ ಯೋಜನೆಗಳನ್ನು ರೂಪಿಸಿದರೂ ಅದರ ಯಶಸ್ಸಿಗೆ ಜನತೆಯ ಸಹಕಾರ ಮುಖ್ಯ. ಪ್ರಜ್ಞಾವಂತ ಜನತೆ ಅದನ್ನು ಅರಿಯಬೇಕುಅಬ್ದುಲ್ ಸಾಬ್ ಹೊಸಮನಿ ಸಾಮಾಜಿಕ ಕಾರ್ಯಕರ್ತರು ರೋಣ
ಬಯಲು ಬಹಿರ್ದೆಸೆ ಪದ್ಧತಿ ನಿರ್ಮೂಲನೆಗೆ ವಿವಿಧ ಸಂಘ-ಸಂಸ್ಥೆಗಳ ಜತೆಗೂಡಿ ಅನೇಕ ಕಡೆಗಳಲ್ಲಿ ಜಾಗೃತಿ ಕಾರ್ಯಕ್ರಮ ಮಾಡಿದ್ದೇವೆ. ಆದರೂ ಗ್ರಾಮೀಣ ಭಾಗದಲ್ಲಿ ಶೌಚಾಲಯಗಳ ಕೊರತೆಯಿಂದ ಇಂದಿಗೂ ಈ ಪದ್ಧತಿ ಮುಂದುವರೆದಿರುವುದು ದುರಂತ. ತಕ್ಷಣವೇ ಸ್ಥಳೀಯ ಸರ್ಕಾರಗಳು ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕು.ಲೀಲಾವತಿ ಚಿತ್ರಗಾರ ಉಪಾಧ್ಯಕ್ಷೆ ಕರ್ನಾಟಕ ರಾಜ್ಯ ರೈತ ಸಂಘ
ಶೌಚಾಲಯ ಬಳಕೆ ಉತ್ತೇಜಿಸಿ ಸರ್ಕಾರಗಳು ಪಂಚಾಯಿತಿ ಮೂಲಕ ವೈಯಕ್ತಿಕ ಶೌಚಾಲಯಗಳು ನಿರ್ಮಿಸಲು ಅನುಕೂಲ ಕಲ್ಪಿಸಿದೆ. ಆದರೆ ಅವುಗಳ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಶೌಚಾಲಯಗಳ ಸಮರ್ಪಕ ಬಳಕೆ ಉತ್ತೇಜಿಸಲು ಸರ್ಕಾರ ಪಡಿತರ ವ್ಯವಸ್ಥೆಯೊಂದಿಗೆ ಟಾಯ್ಲೆಟ್ ಕ್ಲೀನರ್ ಪಡೆಯುವುದನ್ನು ಕಡ್ಡಾಯಗೊಳಿಸಬೇಕು.ಮಲ್ಲಿಕಾರ್ಜುನ ನಾಯ್ಕರ ಕುರಹಟ್ಟಿ ಗ್ರಾಮಸ್ಥರು
ಸಾರ್ವಜನಿಕ ಶೌಚಾಲಯಗಳ ನಿರ್ವಹಣೆಗೆ ಜನತೆಯ ಬೆಂಬಲವಿಲ್ಲ. ವಿಶ್ವ ಆರೋಗ್ಯ ಸಂಸ್ಥೆ ವೈಯಕ್ತಿಕ ಶೌಚಾಲಯಗಳನ್ನು ಪ್ರತಿಯೊಬ್ಬರು ಹೊಂದುವಂತೆ ಸೂಚಿಸಿದೆ. ಕೇಂದ್ರ ಸರ್ಕಾರ ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿ ಈಗಾಗಲೇ ಶೌಚಾಲಯ ನಿರ್ಮಿಸಲು ಅವಕಾಶ ಕಲ್ಪಿಸಿದ್ದರೂ ಅವುಗಳನ್ನು ಸಾರ್ವಜನಿಕರು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ.ಚಂದ್ರಶೇಖರ ಕಂದಕೂರ ಕಾರ್ಯನಿರ್ವಾಹಕ ಅಧಿಕಾರಿ ತಾಲ್ಲೂಕು ಪಂಚಾಯಿತಿ ರೋಣ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.