ಲಕ್ಷ್ಮೇಶ್ವರ: ‘ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಉಗ್ರರನ್ನು ಸದೆಬಡಿದ ನಮ್ಮ ಯೋಧರ ಧೈರ್ಯ ಸಾಹಸ ಶ್ಲಾಘನೀಯ. ಉಗ್ರಗಾಮಿಗಳಿಗೆ ಹಾಗೂ ಪಾಕಿಸ್ತಾನಕ್ಕೆ ನಮ್ಮ ಯೋಧರು ತಕ್ಕ ಉತ್ತರ ನೀಡಿದ್ದಾರೆ. ದೇಶದ ಹೆಮ್ಮೆಯ ಪ್ರತೀಕವಾಗಿರುವ ಯೋಧರ ಜೊತೆಗೆ ಇಡೀ ದೇಶವೇ ನಿಂತಿದೆ’ ಎಂದು ತಾಲ್ಲೂಕಿನ ಶಿಗ್ಲಿ ಗ್ರಾಮದ ಧಾರ್ಮಿಕ ಮುಖಂಡ ವೀರಣ್ಣ ಪವಾಡದ ಹೇಳಿದರು.

ಈ ಕುರಿತು ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಸಿಂಧೂರ ಆಪರೇಷನ್ ಪಾಕಿಸ್ತಾನಕ್ಕೆ ಎಚ್ಚರಿಕೆ ಗಂಟೆಯಾಗಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆಸಿದ ಭಾರತೀಯ ಸೇನೆಯ ಯೋಧರು ಆಭಿನಂದನೀಯ. ಉಗ್ರಗಾಮಿಗಳು ಹಾಗೂ ಅವರಿಗೆ ಆಶ್ರಯ ನೀಡಿದ ಪಾಕಿಸ್ತಾನಕ್ಕೂ ಇದೊಂದು ಎಚ್ಚರಿಕೆಯ ಸಂದೇಶ. ಕೇಂದ್ರ ಸರ್ಕಾರ ಹಾಗೂ ಪ್ರತಿಪಕ್ಷ ಒಗ್ಗಟ್ಟು ಪ್ರದರ್ಶನ ಮಾಡಿದೆ. ನಮ್ಮ ಸೈನಿಕರ ಸುರಕ್ಷತೆಗೆ ಪಾರ್ಥಿಸಬೇಕಾಗಿದೆ. ನಾವು ಒಗ್ಗಟ್ಟಿನ ಮೂಲಕ ಸಂದೇಶ ಕೊಡಬೇಕಾಗಿದೆ. ಉಗ್ರರಿಗೆ ಆಶ್ರಯ ನೀಡುವ ಪಾಕಿಸ್ತಾನಕ್ಕೆ ಈ ಬಾರಿ ಸೇನೆ ತಕ್ಕಪಾಠ ಕಲಿಸಿದೆ. ನಮ್ಮ ತಂಟೆಗೆ ಬಂದರೆ ಉಗ್ರರಿಗೆ ಹಾಗೂ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಎಂಬ ಸಂದೇಶ ರವಾನೆಯಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.