ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಂಡರಗಿ: ರಾಮಕೃಷ್ಣ ದೊಡ್ಡಮನಿ ಕಾಂಗ್ರೆಸ್ ಸೇರ್ಪಡೆಗೆ ವಿರೋಧ

Published 19 ಮಾರ್ಚ್ 2024, 15:51 IST
Last Updated 19 ಮಾರ್ಚ್ 2024, 15:51 IST
ಅಕ್ಷರ ಗಾತ್ರ

ಮುಂಡರಗಿ: 'ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿಯ ಸೋಲಿಗೆ ಕಾರಣವಾಗಿದ್ದಾರೆ. ಅವರನ್ನು ಪುನಃ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ವದಂತಿ ತೀವ್ರವಾಗಿ ಹರಡಿದ್ದು, ಕಾಂಗ್ರೆಸ್ ವರಿಷ್ಠರು ಯಾವ ಕಾರಣಕ್ಕೂ ಅವರನ್ನು ಪುನಃ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬಾರದು' ಎಂದು ತಾಲ್ಲೂಕು ಮಾದಿಗ ಸಮುದಾಯದ ಮುಖಂಡ ದುರುಗಪ್ಪ ಹರಿಜನ ಆಗ್ರಹಿಸಿದರು.

ತಾಲ್ಲೂಕು ಮಾದಿಗ ಸಮುದಾಯದ ಕಾರ್ಯಕರ್ತರು ಮಂಗಳವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಕ್ಷದ ಆದೇಶವನ್ನು ಧಿಕ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರನ್ನು ಈಗಾಗಲೆ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ’ ಎಂದು ತಿಳಿಸಿದರು.

ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮಾದಿಗ ಸಮುದಾಯದ ಮತಗಳು ನಿರ್ಣಾಯಕವಾಗಿದ್ದು, ಅವರು ಬೆಂಬಲಿಸುವ ಪಕ್ಷದ ಅಭ್ಯರ್ಥಿಯು ಇಲ್ಲಿ ಗೆಲುವು ಸಾಧಿಸುತ್ತಾರೆ. ಆದ್ದರಿಂದ ಪಕ್ಷದಿಂದ ಉಚ್ಚಾಟನೆಗೊಂಡ ರಾಮಕೃಷ್ಣ ದೊಡ್ಡಮನಿ ಅವರನ್ನು ಪುನಃ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬಾರದು. ಸೇರಿಸಿಕೊಂಡರೆ ಲೋಕಸಭಾ ಚುನಾವಣೆಯಲ್ಲಿ ಗದಗ-ಹಾವೇರಿ ಜಿಲ್ಲೆಯಾದ್ಯಂತ ಮಾದಿಗ ಸಮುದಾಯದವರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮಾದಿಗ ಸಮುದಾಯದ ಮುಖಂಡ ಲಕ್ಷ್ಮಣ ತಗಡಿನಮನಿ, ಡಂಬಳ ಗ್ರಾ.ಪಂ.ಸದಸ್ಯ ಮರಿಯಪ್ಪ ಸಿದ್ದಣ್ಣವರ ಮಾತನಾಡಿದರು.

ಬಸವರಾಜ ಪೂಜಾರ, ನಿಂಗರಾಜ ಹಾಲಿನವರ, ಪ್ರವೀಣ ವಡ್ಡಟ್ಟಿ, ಮಲ್ಲೇಶ ಹರಿಜನ, ನಿಂಗಪ್ಪ ಪೂಜಾರ, ಸಂತೋಷ ಹಡಗಲಿ, ರಾಘು ತುಂಬೂರಿ, ದುರುಗಪ್ಪ ದೊಡ್ಡಮನಿ, ಮಂಜು ಹರಿಜನ, ದುರುಗಪ್ಪ ಬೂತಾಳಿ ಸುದ್ದಿಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT