ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಂಗ ದಾನ: ಎಲ್ಲರಿಗೂ ಜಾಗೃತಿ ಅಗತ್ಯ– ಸಚಿವ

ವಿಶ್ವ ಅಂಗಾಂಗ ದಾನ ದಿನದ ಅಂಗವಾಗಿ ಕಾಲ್ನಡಿಗೆ, ಸೈಕಲ್ ಜಾಥಾ
Published : 13 ಆಗಸ್ಟ್ 2024, 15:46 IST
Last Updated : 13 ಆಗಸ್ಟ್ 2024, 15:46 IST
ಫಾಲೋ ಮಾಡಿ
Comments

ಗದಗ: ‘ಜಿಲ್ಲೆ, ರಾಜ್ಯ ಸೇರಿ ದೇಶದಲ್ಲಿ ಅಂಗಾಂಗ ವೈಫಲ್ಯಗಳಿಂದ ಬಳುತ್ತಿರುವ ರೋಗಿಗಳ ಸಂಖ್ಯೆ ಅಧಿಕವಾಗಿದೆ. ಅವರೆಲ್ಲರೂ ದಾನಿಗಳ ನಿರೀಕ್ಷೆಯಲ್ಲಿದ್ದಾರೆ. ದಾನಗಳಲ್ಲಿಯೇ ಅಂಗಾಂಗ ದಾನ ಅತ್ಯಂತ ಪವಿತ್ರವಾದದ್ದು, ಸಾರ್ವಜನಿಕರಲ್ಲಿ ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.

ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಐಎಂಎ, ಜಿಮ್ಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲಯನ್ಸ್ ಕ್ಲಬ್ ಹಾಗೂ ನಗರದ ವಿವಿಧ ಆಸ್ಪತ್ರೆಗಳ ಸಹಯೋಗದಲ್ಲಿ ವಿಶ್ವ ಅಂಗಾಂಗ ದಾನ ದಿನದ ಅಂಗವಾಗಿ ಆಯೋಜಿಸಿದ್ದ ವಾಕಥಾನ್‌ ಹಾಗೂ ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಗದಗ-ಬೆಟಗೇರಿ ಅವಳಿ ನಗರದ ವೈದ್ಯರೆಲ್ಲರೂ ಕೂಡಿಕೊಂಡು ವಿಶ್ವ ಅಂಗಾಂಗ ದಾನ ದಿನ ಆಚರಿಸುವ ಮೂಲಕ ಜನ ಜಾಗೃತಿ ಮೂಡಿಸುತ್ತಿರುವುದು ಉತ್ತಮ ಬೆಳವಣಿಗೆ. ಅಂಗಾಂಗ ದಾನ ವಿಷಯ ಕುರಿತು ಉದಾತ್ತ ಉದ್ದೇಶವನ್ನಿಟ್ಟುಕೊಂಡು ಮಾಡುತ್ತಿರುವ ನಿಮ್ಮ ಶ್ರಮ ಯಶಸ್ವಿಯಾಗಲಿ ಎಂದು ಹೇಳಿದರು.

‘ಕಳೆದ 25 ವರ್ಷಗಳ ಹಿಂದೆ ರಕ್ತದಾನಕ್ಕೂ ಕೊರತೆಯಾಗುವಂತಹ ಪರಿಸ್ಥಿತಿ ಇತ್ತು. ಸದ್ಯ ಜನರು ಜಾಗೃತರಾಗಿದ್ದು ಇಂದು ರಕ್ತದಾನ ಶಿಬಿರ ಸೇರಿ ರಕ್ತ ಭಂಡಾರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ರಕ್ತದಾನ ಮಾಡುತ್ತಿದ್ದಾರೆ’ ಎಂದು ಹೇಳಿದರು.

ರಕ್ತದಾನದ ರೀತಿ ಅಂಗಾಂಗ ದಾನ ಅತ್ಯಂತ ಪವಿತ್ರವಾಗಿದೆ. ಅದನ್ನು ಜಾಗೃತಿಗೊಳಿಸಲು ಯುವಕರನ್ನು ಒಟ್ಟುಗೂಡಿಸಿರುವುದು ಸಂತಸದ ವಿಷಯ. ಇಲ್ಲಿ ಸೇರಿರುವ ಎಲ್ಲರೂ ಅಂಗಾಂಗ ದಾನದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವವರಿಗೆ ಅಂಗಾಂಗ ಜೋಡಣೆಗೆ ಅನುಕೂಲವಾಗುವಂತೆ ದಾನಕ್ಕೆ ಪ್ರೇರೇಪಿಸಬೇಕು’ ಎಂದು ತಿಳಿಸಿದರು.

ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿದ ಸಚಿವರು, ವೈದ್ಯರು ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೊಂದಿಗೆ ಕಾಲ್ನಡಿಗೆಯಲ್ಲಿ ಪಾಲ್ಗೊಂಡರು.

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ, ಡಿಎಚ್‌ಒ ಡಾ. ಎಸ್.ಎಸ್. ನೀಲಗುಂದ, ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಡಾ. ಅವಿನಾಶ ಓದುಗೌಡರ ಸೇರಿ ನಗರದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು, ಅವಳಿ ನಗರದ ಶಾಲಾ ಕಾಲೇಜಿನ 1,200 ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಜಾಗೃತಿ ಜಾಥಾದಲ್ಲಿ ನರ್ಸಿಂಗ್‌ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು
ಜಾಗೃತಿ ಜಾಥಾದಲ್ಲಿ ನರ್ಸಿಂಗ್‌ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT