ಗದಗ: ಬಾಲಕನೊಬ್ಬ ಕಾರಿನ ಬಾನೆಟ್ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ನಗರದ ಶಹರ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.

ಈದ್ ಮಿಲಾದ್ ಹಬ್ಬದಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬಾಲಕ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪಾಕಿಸ್ತಾನ ಧ್ವಜವನ್ನು ಪ್ರದರ್ಶಿಸುತ್ತಿರುವ ಫೋಟೊ ಹಂಚಿಕೊಂಡಿದ್ದಾನೆ. ಈ ಪೋಸ್ಟ್ ಅನ್ನು ಅಬ್ದುಲ್ ಎಂಬ ಇನ್ನೊಬ್ಬ ವ್ಯಕ್ತಿ ತನ್ನ ಖಾತೆಯಲ್ಲಿ ಮರು ಹಂಚಿಕೊಂಡಿದ್ದಾನೆ.

ಕಾರಿನ ಬಾನೆಟ್ ಮೇಲೆ ಇಸ್ಲಾಂ ಧರ್ಮದ ಬಾವುಟದ ಜತೆಗೆ ಪಾಕಿಸ್ತಾನದ ಧ್ವಜದ ಚಿತ್ರವು ಕಂಡು ಬಂದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ, ಗದಗ ಶಹರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಕಾಯ್ದೆಯ ಕಲಂ 299, 353(2) ಮತ್ತು 3/5ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.