ಲಕ್ಷ್ಮೇಶ್ವರ: ‘ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಪ್ರತಿ ತಿಂಗಳು ಒಂದು ಕುಟುಂಬಕ್ಕೆ ₹5 ಸಾವಿರ ಕೊಡುವ ಮೂಲಕ ಬಡತನವನ್ನು ಸಂಪೂರ್ಣ ನಿರ್ಮೂಲನೆ ಮಾಡಿದ್ದೇವೆ’ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಪಟ್ಟಣದಲ್ಲಿ ಶನಿವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆ ಶೇ 99ರಷ್ಟು ಗುರಿ ಸಾಧಿಸಿದೆ. ಲಕ್ಷ್ಮೇಶ್ವರ ತಾಲ್ಲೂಕಿನ ಪಂಚ ಗ್ಯಾರಂಟಿ ಅಧ್ಯಕ್ಷ ನಾಗರಾಜ ಮಡಿವಾಳರ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸುವಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ’ ಎಂದರು.

‘ಶಾಸಕರಿಗೆ ವಿಶೇಷ ಅನುದಾನ ನೀಡುವ ಮೂಲಕ ಗ್ಯಾರಂಟಿ ಯೋಜನೆಯಿಂದಾಗಿ ಅಭಿವೃದ್ಧಿ ಕೆಲಸಗಳು ನಿಲ್ಲುತ್ತವೆ ಎಂದು ಬೊಬ್ಬೆ ಹೊಡೆದ ವಿರೋಧ ಪಕ್ಷಗಳಿಗೆ ತಕ್ಕ ಉತ್ತರ ಕೊಟ್ಟಿದ್ದೇವೆ. ಇದು ರಾಷ್ಟ್ರಮಟ್ಟದಲ್ಲಿ ಉತ್ತಮ ಯೋಜನೆಯಾಗಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಡಾ.ಚಂದ್ರು ಲಮಾಣಿ, ‘ಶಿರಹಟ್ಟಿಯಲ್ಲಿ ಇಂದಿರಾ ಕ್ಯಾಂಟೀನ್ ಸರಿ ನಡೆಯುತ್ತಿಲ್ಲ. ಗುತ್ತಿಗೆದಾರರು ಜವಾಬ್ದಾರಿಯಿಂದ ನಡೆಸಿಕೊಂಡು ಹೋಗಬೇಕು. ಪುರಸಭೆ ಪೌರ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್ನಿಂದಲೇ ಉಪಾಹಾರ ಖರೀದಿಸಬೇಕು’ ಎಂದರು.

ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ, ಜಿ.ಎಂ. ಮಹಾಂತಶೆಟ್ಟರ, ರಾಮಣ್ಣ ಲಮಾಣಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ, ಜಿಲ್ಲಾ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಸುಜಾತಾ ದೊಡ್ಡಮನಿ, ಆನಂದಸ್ವಾಮಿ ಗಡ್ಡದೇವರಮಠ, ಪುರಸಭೆ ಅಧ್ಯಕ್ಷೆ ಯಲ್ಲವ್ವ ದುರ್ಗಣ್ಣವರ, ಉಪಾಧ್ಯಕ್ಷ ಫಿರ್ದೋಷ್ ಆಡೂರ, ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯ ಕರಡಿ, ಗುರುನಾಥ ದಾನಪ್ಪನವರ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ, ಎಂಜಿನಿಯರ್ ವೀರೇಂದ್ರಸಿಂಗ್ ಕಾಟೆವಾಲೆ, ಎಸ್.ಪಿ. ಬಳಿಗಾರ, ಚನ್ನಪ್ಪ ಜಗಲಿ, ಕಿರಣ ನವಲೆ ಇದ್ದರು.

ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರು ಸಾರ್ವಜನಿಕರಿಗೆ ಗುಣಮಟ್ಟದ ಆಹಾರ ಕೊಡಬೇಕು. ಬೇಕಾಬಿಟ್ಟಿಯಾಗಿ ಆಹಾರ ಪೂರೈಸಿದರೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ
ಎಚ್.ಕೆ. ಪಾಟೀಲ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.