ಮುಂಡರಗಿ: ಪುರಸಭೆ ವ್ಯಾಪ್ತಿಯ 20ನೇ ವಾರ್ಡ್ನ ಮಸೂತಿ ಓಣಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು ತುಂಬಾ ಇಕ್ಕಟ್ಟಾಗಿದ್ದು, ತಕ್ಷಣ ಅದನ್ನು ವಿಸ್ತರಿಸಿ ಸಾರ್ವಜನಿಕರು ಹಾಗೂ ವಾಹನಗಳ ಸಂಚಾರಕ್ಕೆ ಅನಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿ ಪಟ್ಟಣದ ಮಹಬೂಬ ಸುಬಾನಿ ನಗರದ ಜನರು ಸೋಮವಾರ ಪುರಸಭೆ ಅಧ್ಯಕ್ಷೆ ನಿರ್ಮಲಾ ಕೊರ್ಲಹಳ್ಳಿ, ಮುಖ್ಯಾಧಿಕಾರಿ ಸಂಕರ ಹುಲ್ಲಮ್ಮನವರ ಅವರಿಗೆ ಮನವಿ ಸಲ್ಲಿಸಿದರು.

‘ರಸ್ತೆಯು ತುಂಬಾ ಕಿರಿದಾಗಿದ್ದು, ಕೆಲವರು ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ರಸ್ತೆಯಲ್ಲಿ ಜನರು ಹಾಗೂ ವಾಹನಗಳು ಸಂಚರಿಸದಂತಾಗಿದೆ. ರಸ್ತೆಯ ಮೇಲೆ ಸಂಚರಿಸುವವರು ಸರ್ಕಸ್ ಮಾಡಬೇಕಾದ ಪರಸ್ಥಿತಿ ನಿರ್ಮಾಣವಾಗಿದೆ. ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್, ಅಗ್ನಿ ಶಾಮಕ ಮಾಹನ, ಆಟೊ ಮೊದಲಾದ ವಾಹನಗಳು ಸಂಚರಿಸಲು ಬಾರದಷ್ಟು ರಸ್ತೆ ಕಿರಿದಾಗಿದೆ. ಸಂಬಂಧಪಟ್ಟವರು ತಕ್ಷಣ ರಸ್ತೆಯನ್ನು ದುರಸ್ತಿ ಮಾಡಿಸಬೇಕು. ತಕ್ಷಣ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳದಿದ್ದಲ್ಲಿ ಪುರಸಭೆಯ ಮುಂದೆ ಧರಣಿ ಕೈಗೊಳ್ಳಲಾಗುವುದು’ ಎಂದು ಸಾರ್ವಜನಿಕರು ಎಚ್ಚರಿಸಿದರು.

‘ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ರಸ್ತೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಪುರಸಭೆ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ಹಾಗೂ ಅಧ್ಯಕ್ಷೆ ನಿರ್ಮಲಾ ಕೊರ್ಲಹಳ್ಳಿ ಭರವಸೆ ನೀಡಿದರು.

ರಾಜಾಭಕ್ಷಿ ಬೆಟಗೇರಿ, ಮಾಬೂಸಾಬ ದೊಡ್ಡಮನಿ, ಖಾತುಂಬಿ ಹಣಗಿ, ರಾಜಾಸಾಬ ಕಿನ್ನಾಳ, ಇಮಾಮಸಾಬ ಡಂಬಳ, ಬಸವರಾಜ ಅಸುಂಡಿ, ಇಮಾಬಿ ಡಂಬಳ, ಶಮಿಜಾ ಡಂಬಳ, ಕೆ.ಎ. ಮುಲ್ಲಾ, ಟಿ.ಎಸ್. ಡಂಬಳ, ಆರ್.ಕೆ. ಹಣಗಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.