ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೋಣ | ಪರಿಸರ ರಕ್ಷಣೆಗೆ ಮುಂದಾಗಿ: ಶಾಸಕ

Published 7 ಜುಲೈ 2024, 16:24 IST
Last Updated 7 ಜುಲೈ 2024, 16:24 IST
ಅಕ್ಷರ ಗಾತ್ರ

ರೋಣ: ಪಟ್ಟಣದ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಆವರಣದಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ 2024ನೇ ಸಾಲಿನ ವನಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

ಶಾಸಕ ಜಿ.ಎಸ್ ಪಾಟೀಲ ಚಾಲನೆ ನೀಡಿ ಮಾತನಾಡಿ, ಸಮುದಾಯ ಸಹಭಾಗಿತ್ವದಲ್ಲಿ ವನ ಮಹೋತ್ಸವವನ್ನು ತಾಲ್ಲೂಕಿನಾದ್ಯಂತ ಯಶಸ್ವಿಯಾಗಿ ಆಚರಿಸುವ ಮೂಲಕ ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದು ಅರಣ್ಯ ಇಲಾಖೆಯ ಸಿಬ್ಬಂದಿಗೆ ಸೂಚಿಸಿದರು.

ಈ ವೇಳೆ ಕೆಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಐ.ಎಸ್ ಪಾಟೀಲ ರೋಣ ಪುರಸಭೆ ಉಪಾಧ್ಯಕ್ಷ ಮಿಥುನ್ ಪಾಟೀಲ ಪುರಸಭೆ ಸದಸ್ಯರಾದ ಮಲ್ಲಯ್ಯ ಮಹಾಪುರುಷಮಠ, ಗದಿಗೆಪ್ಪ ಕಿರೇಸೂರ, ದಾವಲಸಾಬ್ ಬಾಡಿನ, ಸಂಗಪ್ಪ ಜಿಡ್ಡಿಬಾಗಿಲ, ಅರಣ್ಯ ಇಲಾಖೆಯ ಅಧಿಕಾರಿಗಳಾದ ರಾಮಣ್ಣ ಪೂಜಾರ, ಅನ್ವರ್‌ ಕೋಲಾರ, ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯಾಧಿಕಾರಿ ಪ್ರಭುಲಿಂಗ ಗಾಣಿಗೇರ ವೈದ್ಯರಾದ ಪ್ರವೀಣ ಸರ್ವದ, ಆಶಾ ನಾಯಕ, ಗಿರೀಶ ಬಡಿಗೇರ ಸಿಬ್ಬಂದಿ ಮಾಧುರಿ ಕಾಂಬಳೆ, ಶರಣಪ್ಪ ಅಬ್ಬಿಗೇರಿ, ಸುರೇಶ ಅಕ್ಕೆರಿ, ಇಮಾಂಬಿ ಕೊಲಕಾರ, ಅರುಣಾ ಹಿರೇಮಠ ಇದ್ದರು.

ರೋಣ ನಗರದ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಆವರಣದಲ್ಲಿ ಶಾಸಕ ಜಿ ಎಸ್ ಪಾಟೀಲ ಸಸಿ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ರೋಣ ನಗರದ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಆವರಣದಲ್ಲಿ ಶಾಸಕ ಜಿ ಎಸ್ ಪಾಟೀಲ ಸಸಿ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT