ಗದಗ: ‘ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ಸಮಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಶ್ರಮ್ ಯೋಗಿ ಮಾನ್- ಧನ್ (ಪಿಎಂ–ಎಸ್ವೈಎಂ) ಎಂಬ ವಂತಿಗೆ ಆಧಾರಿತ ಪಿಂಚಣಿ ಯೋಜನೆ ಜಾರಿಗೆ ತಂದಿದ್ದು, ಅರ್ಹರಿಗೆ ಈ ಯೋಜನೆ ಲಾಭ ದೊರಕಿಸಿಕೊಡಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈಚೆಗೆ ನಡೆದ ಪ್ರಧಾನಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯಡಿ ವಿವಿಧ ಅಸಂಘಟಿತ ಕಾರ್ಮಿಕರನ್ನು ನೋಂದಣಿ ಮಾಡುವುದಕ್ಕಾಗಿ ಜಿಲ್ಲೆಯಾದ್ಯಂತ ವಿಶೇಷ ಅಭಿಯಾನ ನಡೆಸುವ ಕುರಿತಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ಜೀವನ ಸಂಧ್ಯಾಕಾಲದಲ್ಲಿ ದುಡಿದು ತಮ್ಮನ್ನು ಪೋಷಿಸಿಕೊಳ್ಳಲು ಆರ್ಥಿಕ ಮೂಲಗಳು ಇರುವುದಿಲ್ಲ. ಇಂತಹ ಕಾರ್ಮಿಕರಿಗೆ ವಂತಿಗೆ ಆಧಾರಿತ ಈ ಪಿಂಚಣಿ ಯೋಜನೆ ಸಹಕಾರಿಯಾಗಲಿದೆ. ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ. ಫಲಾನುಭವಿಯ ವಯಸ್ಸು 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ ₹3 ಸಾವಿರಗಳ ಖಚಿತ ಕನಿಷ್ಠ ಮಾಸಿಕ ಪಿಂಚಣಿ ಪಡೆಯಲು ಅರ್ಹರಾಗುತ್ತಾರೆ’ ಎಂದು ತಿಳಿಸಿದರು.

‘ಫಲಾನುಭವಿಯು ನಿರಂತರವಾಗಿ ವಂತಿಕೆಯನ್ನು ಪಾವತಿಸಿದ್ದು ಅವರು 60 ವರ್ಷದ ಒಳಗಾಗಿ ಮೃತಪಟ್ಟಲ್ಲಿ ಅಥವಾ ಶಾಶ್ವತ ಅಂಗ ನ್ಯೂನತೆಯಿಂದ ವಂತಿಕೆಯನ್ನು ಪಾವತಿಸಲು ಸಾಧ್ಯವಾಗದಿದ್ದಲ್ಲಿ ಅವರ ಸಂಗಾತಿಯು ತದನಂತರ ಈ ಯೋಜನೆಗೆ ಸೇರಬಹುದಾಗಿದೆ. ಪಿಂಚಣಿ ಆರಂಭಗೊಂಡ ನಂತರ ಚಂದಾದಾರರು ಮೃತಪಟ್ಟಲ್ಲಿ ಅವರ ಪತ್ನಿ, ಪತಿ ಮಾತ್ರ ಪಿಂಚಣಿಯ ಶೇ 50ರಷ್ಟು ಹಣ ಪಡೆಯಲು ಅರ್ಹರಾಗಿರುತ್ತಾರೆ’ ಎಂದು ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ ಮಾತನಾಡಿ, ‘ಪಿಎಂ– ಎಸ್ವೈಎಂ ಯೋಜನೆಗೆ ಒಳಪಡುವ ಕಾರ್ಮಿಕರು ಅಸಂಘಟಿತ ವಲಯದ ಕಾರ್ಮಿಕರಾಗಿದ್ದು, 18ರಿಂದ 40 ವರ್ಷದೊಳಗಿರಬೇಕು. ಗದಗ ಜಿಲ್ಲೆಯಲ್ಲಿನ 7,275 ಅಸಂಘಟಿತ ಕಾರ್ಮಿಕರಿಗೆ ಈ ಯೋಜನೆ ನೋಂದಣಿ ಮಾಡುವ ಗುರಿ ನಿಗದಿಪಡಿಸಲಾಗಿದೆ. ಅವರ ಮಾಸಿಕ ಆದಾಯ ₹15 ಸಾವಿರ ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಅವರ ಆದಾಯ ತೆರಿಗೆ, ಇಎಸ್ಐ, ಪಿಎಫ್, ಎನ್ಪಿಎಸ್ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು. ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಸಂಖ್ಯೆ ಹೊಂದಿರಬೇಕು’ ಎಂದು ತಿಳಿಸಿದರು.

ಅರ್ಹ ಅಸಂಘಟಿತ ಕಾರ್ಮಿಕರು ಹತ್ತಿರದ ಕಾಮನ್ ಸರ್ವಿಸ್ ಸೆಂಟರ್ (ಸಿಎಸ್ಸಿ)ಗಳಲ್ಲಿ ಯೋಜನೆಯಡಿ ಫಲಾನುಭವಿಗಳಾಗಿ ನೋಂದಾಯಿಸಬಹುದಾಗಿದೆ. ಸಿಎಸ್ಸಿಗಳ ವಿವರಗಳನ್ನು ಹತ್ತಿರದ ಎಲ್ಐಸಿ ಶಾಖೆಗಳು, ಕಾರ್ಮಿಕ ಇಲಾಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ, ಇಎಸ್ಐ, ಕಾರ್ಪೋರೇಷನ್ ಹಾಗೂ ಭವಿಷ್ಯ ನಿಧಿ ಸಂಘಟನೆಯ ಕಚೇರಿಗಳು ಹಾಗೂ ಇಲಾಖೆಯ ವೆಬ್ವಿಳಾಸಗಳು ಹಾಗೂ ವೆಬ್ ವಿಳಾಸ http://locator.csccloud.in ಗಳಲ್ಲಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್.ಮುಂಡರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ರಾಧಾ ಮಣ್ಣೂರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಮಲ್ಲೂರ, ಸಹಾಯಕ ಕೃಷಿ ನಿರ್ದೇಶಕ ರಮೇಶ ನಾಯ್ಕ, ಕಾರ್ಮಿಕ ಇಲಾಖೆಯ ಸಂದೇಶ ಪಾಟೀಲ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.