ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಳಸಂತೆಯಲ್ಲಿ ₹30 ಸಾವಿರಕ್ಕೆ ರೆಮ್‌ಡಿಸಿವಿರ್‌ ಮಾರಾಟ: ನಾಲ್ವರ ಬಂಧನ

Last Updated 23 ಮೇ 2021, 11:39 IST
ಅಕ್ಷರ ಗಾತ್ರ

ಗದಗ: ಕಾಳಸಂತೆಯಲ್ಲಿ ರೆಮ್‌ಡಿಸಿವಿರ್‌ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿರುವ ನಗರದ ಪೊಲೀಸರು ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ನಾಲ್ಕು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಮಹಿಳಾ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಮಹಮದ್‌ ಇಸ್ಮಾಯಿಲ್‌, ಫಿರೋಜ್‌ ಖಾನ್‌, ಜಿಮ್ಸ್‌ನ ಲ್ಯಾಬ್‌ ಟೆಕ್ನೀಷಿಯನ್‌ ಗವಿಸಿದ್ದಯ್ಯ ಹಿರೇಮಠ, ರಮೇಶ ಚವಟಗಿ ಹಾಗೂ ಶುಶ್ರೂಷಕಿ ಜ್ಯೋತಿ ಲಮಾಣಿ ಆರೋಪಿಗಳು.

‘ಜೀವರಕ್ಷಕ ಚುಚ್ಚುಮದ್ದನ್ನು ₹30 ಸಾವಿರಕ್ಕೆ ಒಂದರಂತೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಸುಳಿವು ಆಧರಿಸಿ ಸಿಇಎನ್‌ ಠಾಣೆಯ ಇನ್‌ಸ್ಪೆಕ್ಟರ್‌ ಮಹಾಂತೇಶ ಟಿ. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದೆ. ಅವರು ಗದಗ– ಮುಳಗುಂದ ರಸ್ತೆಯ ರಾಧಾಕೃಷ್ಣ ನಗರದ ಬಳಿ ಸಿಕ್ಕಿಬಿದ್ದಿದ್ದಾರೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್‌ ಎನ್‌. ತಿಳಿಸಿದ್ದಾರೆ.

ಪೊಲೀಸರು ಬಂಧಿತರಿಂದ 14 ರೆಮ್‌ಡಿಸಿವಿರ್‌ ಇಂಜೆಕ್ಷನ್‌, ₹2500 ನಗದು ಹಾಗೂ ನಾಲ್ಕು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾಳಸಂತೆಯನ್ನು ರೆಮ್‌ಡಿಸಿವಿರ್‌ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿರುವ ಪೊಲೀಸರ ತಂಡವನ್ನು ಎಸ್‌ಪಿ ಯತೀಶ್‌ ಎನ್‌. ಶ್ಲಾಘಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT