‘ವಸತಿ ನಿಲಯ ನಿರ್ಮಾಣಕ್ಕೆ ಪ್ರಮಾಣಿಕ ಪ್ರಯತ್ನ’
ತಾಲ್ಲೂಕಿನ ಗೊಜನೂರು ಗ್ರಾಮದಲ್ಲಿ ಕಳೆದ 12 ವರ್ಷಗಳಿಂದ ನಡೆಯುತ್ತಿರುವ ಕರ್ನಾಟಕ ಸರ್ಕಾರ ಕಸ್ತೂರ್ಬಾ ಗಾಂಧಿ ವಸತಿ ನಿಲಯಕ್ಕೆ ಸ್ವಂತ ಕಟ್ಟಡ ಇರದ ಕಾರಣ ನೂರಾರು ಬಾಲಕಿಯರು ಸಣ್ಣ ಕೊಠಡಿಯಲ್ಲಿ ವಾಸ್ತವ್ಯ ಮಾಡಬೇಕಾದ ಪರಿಸ್ಥಿತಿ ಇದ್ದು ನೂತನ ವಸತಿ ನಿಲಯ ನಿರ್ಮಿಸುವ ಅಗತ್ಯ ಇದೆ ಎಂದು ಸುದ್ದಿಗಾರರು ಶಾಸಕರ ಗಮನ ಸೆಳೆದಾಗ ‘ಈ ಕುರಿತು ಈಗಾಗಲೇ ಸದನದಲ್ಲಿ ಚರ್ಚಿಸಿದ್ದೇನೆ. ವಸತಿ ನಿಲಯಕ್ಕೆ ಅಗತ್ಯ ಇರುವ ಅನುದಾನ ತಂದು ಹೊಸ ಕಟ್ಟಡ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದರು.