ಲಕ್ಕುಂಡಿ: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಿಲ್ಲಿ ಗದಗ ತಾಲ್ಲೂಕಿನ 36 ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ ಹೇಳಿದರು.

ಇಲ್ಲಿಯ ಸರ್ಕಾರಿ ಮಾದರಿ ದ್ವಿಭಾಷಾ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಲಕ್ಕುಂಡಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಲಕ್ಕುಂಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಪೂರ್ವ ಪ್ರಾಥಮಿಕ ಶಾಲೆ ಆರಂಭವಾದರೆ 1ನೇ ತರಗತಿಗೆ ಅದೇ ಮಕ್ಕಳು ಪ್ರವೇಶ ಪಡೆಯುತ್ತಾರೆ ಎಂಬ ಉದ್ದೇಶದಿಂದ 36 ಕಡೆ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸುತ್ತಿದ್ದೇವೆ. ಶಾಲಾ ಅಭಿವೃದ್ಧಿ ಸಮಿತಿಯು ಗ್ರಾಮದ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಪ್ರೋತ್ಸಾಹಿಸಬೇಕು. ಗ್ರಾಮ ಪಂಚಾಯಿತಿ, ಎಸ್.ಡಿ.ಎಂ.ಸಿ, ಗ್ರಾಮಸ್ಥರು ಇದಕ್ಕೆ ಸಹಕರಿಸಬೇಕು’ ಎಂದರು.

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಎಸ್.ಎಚ್.ಶೆಟ್ಟಿನಾಯ್ಕರ, ಪಿಡಿಒ ಅಮೀರನಾಯಕ ಮಾತನಾಡಿದರು. ಮೀರಾನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಗವಿಶಿದ್ದಪ್ಪ ಯಲಿಶಿರುಂಜ ಅಧ್ಯಕ್ಷತೆ ವಹಿಸಿದ್ದರು.

ಅಕ್ಷರ ದಾಸೋಹದ ನಿರ್ದೇಶಕ ಶಂಕರ ಹಡಗಲಿ, ಗ್ರಾಮ ಪಂಚಾಯಿತಿ ಸದಸ್ಯರಾದ ಅನಸಮ್ಮ ಅಂಬಕ್ಕಿ, ಕುಬೇರಪ್ಪ ಬೆಂತೂರು ಹಾಗೂ ಅಶೋಕ ಬೂದಿಹಾಳ, ಎನ್.ಎಚ್.ಪಾಟೀಲ, ಎಸ್.ಬಿ.ಹೊರಕೇರಿ, ಪಿ.ಎಂ.ಅಯ್ಯನಗೌಡರ, ರಮಜಾನಸಾಬ ತಹಶೀಲ್ದಾರ, ಪವಿತ್ರಾ ಬಣವಿ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ಪಿ.ಎನ್.ಶಿರೋಳ ಸ್ವಾಗತಿಸಿದರು. ಅಂಜನಾ ಕರಿಯಲ್ಲಪ್ಪನವರ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.