ಶುಕ್ರವಾರ, ಅಕ್ಟೋಬರ್ 23, 2020
21 °C
ಮುಳಗುಂದ ಪಟ್ಟಣ ಪಂಚಾಯ್ತಿ ಮೀಸಲಾತಿ: ಕಾಂಗ್ರೆಸ್ ಆಡಳಿತ ಪಕ್ಕಾ, ಆಕಾಂಕ್ಷಿಗಳಿಬ್ಬರ ಮಧ್ಯೆ ಪೈಪೊಟಿ

ಮುಳಗುಂದ: ಅಧ್ಯಕ್ಷ ಎಸ್‌ಸಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಳಗುಂದ: ಸ್ಥಳೀಯ ಪಟ್ಟಣ ಪಂಚಾಯ್ತಿಗೆ ಚುನಾವಣೆ ನಡೆದು 2 ವರ್ಷ ಕಳೆದ  ನಂತರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪ್ರಕಟವಾಗಿದೆ. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.

ಇಲ್ಲಿ ಕಾಂಗ್ರೆಸ್ 15 ಸ್ಥಾನಗಳನ್ನು ಗೆದ್ದಿದ್ದು ಸ್ಪಷ್ಟ ಬಹುಮತ ಹೊಂದಿದ್ದು, ಅಧ್ಯಕ್ಷ ಸ್ಥಾನಕ್ಕಾಗಿ ಆಕಾಂಕ್ಷಿಗಳಿಬ್ಬರನಡುವೆ ಪೈಪೋಟಿ ಇದೆ.

ಒಟ್ಟು 19 ಸದಸ್ಯರನ್ನು ಹೊಂದಿದ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ 15 ಕಾಂಗ್ರೆಸ್‌, 3 ಬಿಜೆಪಿ, ಒಬ್ಬರು ಪಕ್ಷೇತರ ಸದಸ್ಯರು ಆಯ್ಕೆಯಾಗಿದ್ದಾರೆ. ಎಸ್‌.ಸಿಗೆ ಮೀಸಲಿದ್ದ 18 ನೇ ವಾರ್ಡ್‌ನಿಂದ ಚುನಾಯಿತರಾದ ಕಾಂಗ್ರೆಸ್ ಪಕ್ಷದ ಹೊನ್ನಪ್ಪ ವಡ್ಡರ, ಹಾಗೂ 11 ನೇ ವಾರ್ಡ್‌ನ ಪಕ್ಷೇತರ ಸದಸ್ಯ ಬಸವರಾಜ ಹಾರೋಗೇರಿ ಆಯ್ಕೆಯಾಗಿದ್ದಾರೆ.  ನಂತರ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದು ಕಾಂಗ್ರೆಸ್ ಬಲ 16ಕ್ಕೆರಿದೆ. ಹೀಗಾಗಿ ಈ ಇಬ್ಬರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ಬಿಜೆಪಿ ಗೆದ್ದ 3 ಸ್ಥಾನಗಳಲ್ಲಿ ಎಸ್‌.ಸಿಗೆ ಮೀಸಲಾಗಿದ್ದ 4ನೇ ವಾರ್ಡ್‌ನ ಸದಸ್ಯೆ ಅನಸುಯಾ ಸೋಮಗಿರಿ ಚುನಾಯಿತರಾಗಿದ್ದು ಪೈಪೂಟಿ ನೀಡುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಇನ್ನು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲು ಇರುವುದರಿಂದ ಅಲ್ಲಿ ಅಷ್ಟೇನೂ ಪೈಪೋಟಿ ಇಲ್ಲ ಎಂಬ ಮಾತು ಕೇಳಿಬಂದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.