ಗದಗ: ‘ಶಿರಹಟ್ಟಿ ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ ಅ.4ರಂದು ಸರ್ಕಾರಿ ಹಾಗೂ ಸಾರ್ವಜನಿಕ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಭೂಮಿಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಪಕ್ಷಾತೀತವಾಗಿ ಭಾಗವಹಿಸಲಿದ್ದಾರೆ’ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ತಿಪ್ಪಣ್ಣ ಕೊಂಚಿಗೇರಿ ತಿಳಿಸಿದರು.

‘ಕಾಗಿನೆಲೆಯ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸುವರು’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಪದವಿಪೂರ್ವ ಕಾಲೇಜು ಕಟ್ಟಡ ಉದ್ಘಾಟಿಸುವರು. ಸಂಸದ ಬಸವರಾಜ ಬೊಮ್ಮಾಯಿ ಎಚ್ಡಿಎಫ್ಸಿ ಬ್ಯಾಂಕ್ನ ನೂತನ ಶಾಖೆ ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಬೀರಲಿಂಗೇಶ್ವರ ಸಮುದಾಯ ಭವನದ ಶಂಕುಸ್ಥಾಪನೆ ನೆರವೇರಿಸುವರು’ ಎಂದು ತಿಳಿಸಿದರು.

‘ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಸಂತೆಕಟ್ಟೆ ಉದ್ಘಾಟಿಸುವರು. ಶಾಸಕ ಡಾ.ಚಂದ್ರು ಲಮಾಣಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣಗೊಳಿಸುವರು. ಪ್ರದೀಪ್ ಶೆಟ್ಟರ್ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟಿಸುವರು. ಮಾಜಿ ಶಾಸಕ ಡಿ.ಆರ್. ಪಾಟೀಲ ಗ್ರಂಥಾಲಯ ಉದ್ಘಾಟಿಸುವರು. ಕಡಕೋಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೇಮಾ ಹರ್ಲಾಪೂರ ಅಧ್ಯಕ್ಷತೆ ವಹಿಸುವರು’ ಎಂದು ವಿವರಿಸಿದರು.

‘ಮುಖಂಡರಾದ ಜಿ.ಎಸ್. ಗಡ್ಡದೇವರಮಠ, ಗಂಗಣ್ಣ ಮಹಾಂತಶೆಟ್ಟರ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಸುಜಾತಾ ದೊಡ್ಡಮನಿ, ವಾಸಣ್ಣ ಕುರಡಗಿ, ವಿಶ್ವನಾಥ ಕಪ್ಪತ್ತನವರ, ರುದ್ರಣ್ಣ ಗುಳಗುಳಿ, ದೇವರಡ್ಡಿ ಅಗಸನಕೊಪ್ಪ, ಬೂದಪ್ಪ ಹಳ್ಳಿ, ಪ್ರಕಾಶ ಕರಿ, ವೈ.ಎನ್. ಗೌಡ್ರ, ಲಿಂಗರಾಜಗೌಡ್ರ ಪಾಟೀಲ, ಡಿ.ಡಿ. ಮೊರನಾಳ, ಮಲ್ಲಪ್ಪ ಹಣಜಿ, ರಮೇಶ ಸಜ್ಜಗಾರ, ನಾಗರಾಜ ಮೆಣಸಗಿ, ಭಾಗ್ಯಶ್ರೀ ಬಾಬಣ್ಣ’ ಭಾಗವಹಿಸುವರು ಎಂದು ತಿಳಿಸಿದರು.

ಹಾಲುಮತ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ರುದ್ರಣ್ಣ ಗುಳಗುಳಿ ಮಾತನಾಡಿ, ‘ಸಭಾ ಕಾರ್ಯಕ್ರಮದ ಬಳಿಕ ಕಡಕೋಳ ಅಪ್ಪು ಮೆಲೋಡಿಸ್ ಆರ್ಕೆಸ್ಟ್ರಾ ತಂಡದಿಂದ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

‘ಕಿರಣ ಹರ್ಲಾಪೂರ ಸಾರಥ್ಯದಲ್ಲಿ ಮ್ಯೂಜಿಕ್ ಮೈಲಾರಿ, ರಮೇಶ ಲಮಾಣಿ, ಗಿರೀಶ ಪಾಟೀಲ, ವಿಶ್ವನಾಥ ಉಳ್ಳಾಗಡ್ಡಿ, ಹನಮಂತಪ್ಪ ಬಟ್ಟೂರ, ಸಂತೋಷ ಪೂಜಾರ, ಲಕ್ಷ್ಮಿ ವಿಜಯಪುರ, ಪಲ್ಲವಿ ಗಜೇಂದ್ರಗಡ ಸಂಗೀತ ಕಾರ್ಯಕ್ರಮ ನಡೆಸಿಕೊಡುವರು’ ಎಂದು ತಿಳಿಸಿದರು.

ಪ್ರಮುಖರಾದ ಶರಣಪ್ಪ ಹರ್ಲಾಪೂರ, ಫಕೀರಪ್ಪ ಹೆಬಸೂರ, ಹಾಲಪ್ಪ, ಅಂದಾನಪ್ಪ ಕೋರಿ, ಭಾಗ್ಯಶ್ರೀ ಬಾಬಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.