ಶನಿವಾರ, ಮೇ 28, 2022
31 °C

ಜಿಲ್ಲಾ ಕಾರಾಗೃಹದಲ್ಲಿ ಯುವಕ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ಪೋಕ್ಸೊ ಪ್ರಕಣದಲ್ಲಿ ಜೈಲು ಸೇರಿದ್ದ ಗದಗ ತಾಲ್ಲೂಕಿನ ಅಡವಿ ಸೋಮಾಪುರ ಗ್ರಾಮದ ರಾಜು ಲಮಾಣಿ (19) ಗುರುವಾರ ರಾತ್ರಿ ಜಿಲ್ಲಾ ಕಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ರಾಜು ಲಮಾಣಿ, ಅದೇ ಕಾಲೇಜಿನಲ್ಲಿ ಪ್ರಥಮ ಪಿಯು ಓದುತ್ತಿದ್ದ ಹುಡುಗಿಯನ್ನು ಪ್ರೀತಿಸುತ್ತಿದ್ದ. ಇಬ್ಬರೂ ಗೋವಾಕ್ಕೆ ಓಡಿ ಹೋಗಿದ್ದರು. ಬಳಿಕ ಹುಡುಗಿಯ ಪೋಷಕರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿದ್ದರು.

 20 ದಿನಗಳಿಂದ ಜೈಲಿನಲ್ಲಿ ಇದ್ದ ಯುವಕನಿಗೆ  ಶುಕ್ರವಾರ ಮಧ್ಯಾಹ್ನ 2.30ಕ್ಕೆ ಹೊರಬರುವವನಿದ್ದ. ಆದರೆ, ಯುವಕ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಲ್ ಸಿಗುವುದಿಲ್ಲ ಎಂಬ ಭೀತಿ ಹಾಗೂ ಜಾಮೀನು ಸಿಕ್ಕ ವಿಷಯ ಸೂಕ್ತ ಸಮಯದಲ್ಲಿ ಯುವಕನಿಗೆ ದೊರೆಯದ ಕಾರಣ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಎಂದು ಪೊಲೀಸರು ಹಾಗೂ ವಕೀಲರು ತಿಳಿಸಿದ್ದಾರೆ.

ಯುವಕನ ಸಾವಿಗೆ ಜೈಲು ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಯುವಕನ ಪೋಷಕರು ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು