ಗದಗ: ‘ಹಳೇ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿಗೆ ಆಗ್ರಹಿಸಿ ಬೃಹತ್ ಸಮಾವೇಶ ನಡೆಸಲು ನೌಕರರೊಂದಿಗೆ ಚರ್ಚಿಸಿ, ನಿರ್ಧರಿಸಲಾಗುವುದು’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.

ನಗರದಲ್ಲಿ ಭಾನುವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ 2.93 ಲಕ್ಷ ಮಂದಿ ಎನ್ಪಿಎಸ್ ನೌಕರರು ಇದ್ದಾರೆ. ಒಪಿಎಸ್ಗಾಗಿ ಸರ್ಕಾರ ಶೇ 10 ಮೊತ್ತ ನೀಡಿದರೆ ವರ್ಷಕ್ಕೆ ₹3 ಸಾವಿರ ಕೋಟಿ ಹೊರೆ ಆಗುತ್ತದೆ. ಆದರೆ, ರಾಜ್ಯದಲ್ಲಿ 2.73 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಅದರಿಂದ ಸುಮಾರು ₹2,500 ಕೋಟಿ ಉಳಿತಾಯ ಆಗುತ್ತಿದೆ. ಎನ್ಪಿಎಸ್ ಕಮಿಟಿ ಅಧ್ಯಕ್ಷರಾದ ಉಮಾ ಮಹಾದೇವನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತಿಳಿಸಿಕೊಡಲಾಗಿದೆ. ಎನ್ಪಿಎಸ್ನಿಂದ ಒಪಿಎಸ್ ಆಗಬೇಕು. ಅದು ಬಿಟ್ಟು ಬೇರೆ ಯಾವುದೇ ನಿರ್ಣಯಕ್ಕೂ ಒಪ್ಪುವುದಿಲ್ಲ ಎಂಬುದನ್ನು ತಿಳಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.