ಗದಗ: ವೈಮಾನಿಕ ದಾಳಿಯಿಂದ ಬೆದರಿದ ಸಾರ್ವಜನಿಕರು ದಿಕ್ಕಾಪಾಲಾಗಿ ಓಡಲಾರಂಭಿಸಿದರು. ಬಾಂಬ್ ಸ್ಫೋಟಗೊಂಡ ಕೂಡಲೇ ಗಾಯಾಳುಗಳು ಕೆಳಕ್ಕೆ ಬಿದ್ದು ನರಳಾಡಿದರು. ತಕ್ಷಣವೇ ಸೈರನ್ ಮೊಳಗಿತು.

ಮಾಹಿತಿ ಸಿಕ್ಕ ಕ್ಷಣಮಾತ್ರದಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಬಂದರು. ಜತೆಗೆ ಅಗ್ನಿಶಾಮಕದಳ, ಪೊಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿ ರಕ್ಷಣಾ ಕಾರ್ಯಕ್ಕೆ ಮುಂದಾದರು. ತೀವ್ರವಾಗಿ ಗಾಯಗೊಂಡವರನ್ನು ವೈದ್ಯಕೀಯ ಸಿಬ್ಬಂದಿ ಆಂಬುಲೆನ್ಸ್ನಲ್ಲಿ ಕರೆದುಕೊಂಡು ಆಸ್ಪತ್ರೆಗೆ ಹೋದರು...

ಅರೇ.. ಇದೇನಿದು, ಗದಗ ನಗರದಲ್ಲಿ ಬಾಂಬ್ ಸ್ಫೋಟಗೊಂಡಿತೆ? ಜನರು ಗಾಯಗೊಂಡರೇ ಎಂದು ಹುಬ್ಬೇರಿಸಬೇಡಿ. ನಗರದ ವಿಡಿಎಸ್ಟಿ ಮೈದಾನದಲ್ಲಿ ಗದಗ ಜಿಲ್ಲಾಡಳಿತದ ವತಿಯಿಂದ ಗುರುವಾರ ಆಯೋಜಿಸಿದ್ದ ಸ್ವರಕ್ಷಣಾ ತಾಲೀಮಿನ ಅಣಕು ಪ್ರದರ್ಶನದಲ್ಲಿ ಕಂಡು ಬಂದ ದೃಶ್ಯಗಳಿವು.

ಭಾರತ, ಪಾಕಿಸ್ತಾನದ ನಡುವೆ ಯುದ್ಧ ಭೀತಿ ಮುಂದುವರಿದಿರುವ ಹಿನ್ನಲೆಯಲ್ಲಿ ರಾಜ್ಯ ಗೃಹ ಇಲಾಖೆ ಆದೇಶದಂತೆ ಜಿಲ್ಲಾಡಳಿತವು ಮಾಕ್ ಡ್ರಿಲ್ ನಡೆಸಿತು. ಒಂದು ವೇಳೆ ಯುದ್ಧದ ತೀವ್ರತೆ ಇಲ್ಲೀವರೆಗೆ ತಲುಪಿದರೆ ಸಾರ್ವಜನಿಕರು ಯಾವ ರೀತಿ ಮುಂಜಾಗ್ರತೆ ವಹಿಸಬೇಕು ಎಂಬುದರ ಕುರಿತು ಅಣಕು ಕಾರ್ಯಾಚರಣೆ ಮೂಲಕ ತಿಳಿಸಿಕೊಡಲಾಯಿತು.

ಅಗ್ನಿಶಾಮಕದಳದ ಸಿಬ್ಬಂದಿ ಅಗ್ನಿ ಅವಘಡ ನಡೆದ ಸಂದರ್ಭದಲ್ಲಿ ಯಾವ ರೀತಿ ಮುಂಜಾಗ್ರತೆ ವಹಿಸಬೇಕು ಎಂಬುದರ ಬಗ್ಗೆ ಪ್ರದರ್ಶನ ನೀಡಿದರು. ಬೆಂಕಿ ನಂದಿಸುವ ಬಗ್ಗೆ ತಿಳಿಸಿಕೊಟ್ಟರು. ಅಗ್ನಿ ಅವಘಡದ ಸಂದರ್ಭದಲ್ಲಿ 101 ಅಥವಾ 112ಗೆ ಕರೆ ಮಾಡುವಂತೆ ಸೂಚಿಸಿದರು. ವೈದ್ಯಕೀಯ ಸಿಬ್ಬಂದಿ ತುರ್ತು ಸಂದರ್ಭದ ಅಣಕು ಪ್ರದರ್ಶನ ನೀಡಿದರು. ಗಾಯಗೊಂಡವರಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ಕೊಡಿಸಿ, ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ದೃಶ್ಯಗಳನ್ನು ಮರುಸೃಷ್ಟಿಸಿದರು.

ವಿಧ್ವಂಸಕ ತಡೆ ರಕ್ಷಣಾ ದಳ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯಗೊಳಿಸುವ ತಂಡ, ಜಿಲ್ಲಾ ವಿಶೇಷ ಶಸ್ತ್ರಾಸ್ತ್ರ ಮತ್ತು ತಂತ್ರಗಳ ತಂಡ ಕೂಡ ಅಣಕು ಪ್ರದರ್ಶನ ನೀಡಿದವು.

ಬಳಿಕ ಮಾತನಾಡಿದ ಗದಗ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ‘ಯುದ್ಧದ ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತಾಗಿ ಜನರಿಗೆ ಜಾಗೃತಿ ಮೂಡಿಸಲು ಅಣಕು ಪ್ರದರ್ಶನ ಕೈಗೊಳ್ಳಲಾಯಿತು’ ಎಂದರು.

‘ನಗರದಲ್ಲಿ ವೈಮಾನಿಕ ದಾಳಿಯಾದಾಗ ಅದಕ್ಕೆ ವಿವಿಧ ಇಲಾಖೆಗಳ ಅಧಿಕಾರಿಗಳು ಯಾವ ರೀತಿಯ ಕಾರ್ಯಾಚರಣೆ ನಡೆಸುತ್ತಾರೆ ಎಂಬುದರ ಅಣುಕು ಪ್ರದರ್ಶನ ಇದಾಗಿದೆ. ವಿವಿಧ ಇಲಾಖೆಗಳಿಂದ ಅನೇಕ ಪ್ರಾತ್ಯಕ್ಷಿಕೆಗಳನ್ನು ಕೈಗೊಳ್ಳಲಾಯಿತು’ ಎಂದು ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಂ.ಬಿ.ಸಂಕದ, ಪೊಲೀಸ್ ಹಿರಿಯ ಅಧಿಕಾರಿಗಳು, ಹೆಸ್ಕಾಂ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳು ಸಾರ್ವಜನಿಕರು ಹಾಜರಿದ್ದರು.

ಅಣಕು ಪ್ರದರ್ಶನದಲ್ಲಿ 18 ತಂಡಗಳು ಭಾಗಿ

‘ಯಾವುದಾದರೂ ತುರ್ತು ಪರಿಸ್ಥಿತಿ ಎದುರಾದಾಗ ಅದನ್ನು ಎದುರಿಸಲು ಯಾವ ರೀತಿ ತಯಾರಿ ಆಗಿರಬೇಕು ಎಂಬುದರ ಕುರಿತು ಜನಜಾಗೃತಿ ಮೂಡಿಸಲು ಸ್ವರಕ್ಷಣೆಯ ಅಣಕು ಪ್ರದರ್ಶನ ನಡೆಸಲಾಯಿತು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ತಿಳಿಸಿದರು. ಅಣುಕು ಪ್ರದರ್ಶನದಲ್ಲಿ 22 ಇಲಾಖೆಗಳು ಸೇರಿದಂತೆ ಎನ್ಸಿಸಿ ಎನ್ಎಸ್ಎಸ್ ಮಾಜಿ ಸೈನಿಕರು ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಒಳಗೊಂಡು 300 ಜನರು ಭಾಗವಹಿಸಿದ್ದರು. ಬಾಂಬ್ ಸ್ಫೋಟವಾದಾಗ ಅದಕ್ಕೆ ಯಾವ ರೀತಿ ಪ್ರತಿಕ್ರಿಯಿಸಬೇಕು. ಅಲರ್ಟ್ ಮೆಸೇಜ್ ಬಂದ ತಕ್ಷಣ ಯಾವ ತಂಡ ಯಾವ ಕೆಲಸವನ್ನು ಮಾಡಬೇಕು ಎನ್ನುವ ಜವಾಬ್ದಾರಿಗಳನ್ನು ಈ ಮೂಲಕ ತಿಳಿಸಲಾಯಿತು. ಅಣುಕು ಪ್ರದರ್ಶನದಲ್ಲಿ 18 ತಂಡಗಳು ಭಾಗವಹಿಸಿದ್ದವು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.