ಗದಗ: ‘ಪಂಚಾಕ್ಷರ ಗವಾಯಿ ಹಾಗೂ ಪುಟ್ಟರಾಜ ಗವಾಯಿ ಅವರ ಪುಣ್ಯಸ್ಮರಣೋತ್ಸವ ಅಂಗವಾಗಿ ಜೂನ್ 29ರಿಂದ ಜುಲೈ 3ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ’ ಎಂದು ವೀರೇಶ್ವರ ಪುಣ್ಯಾಶ್ರಮದ ವ್ಯವಸ್ಥಾಪಕ ಬಸವರಾಜ ಹಿಡ್ಕಿಮಠ ಹೇಳಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜೂನ್ 29ರಂದು ಸಂಜೆ 5ಕ್ಕೆ ಉದ್ಘಾಟನೆ ನಡೆಯಲಿದ್ದು, ಉಜ್ಜಯಿನಿ ಪೀಠದ ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಶಿವಲಿಂಗೇಶ್ವರ ಕುಮಾರೇಂದ್ರ ಸ್ವಾಮೀಜಿ, ವಿಮಲರೇಣುಕ ವೀರಮುಕ್ತಿಮುನಿ ಸ್ವಾಮೀಜಿ, ಕೊಟ್ಟೂರು ಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸಲಿದ್ದಾರೆ’ ಎಂದರು.

‘ಸ್ವರ ಸಿಂಧು, ಸಂಗೀತ ಶಿವತೇಜ, ಗುರು ಪುಟ್ಟರಾಜ ಗ್ರಂಥ ಬಿಡುಗಡೆ, ಶ್ರೀಕೃಷ್ಣ ಗಾರುಡಿ ನಾಟಕ ಪ್ರದರ್ಶನ ನಡೆಯಲಿದೆ. ಜೂನ್ 30 ರಂದು ಕೀರ್ತನ ಸಮ್ಮೇಳನ, ಅಂಧರ ಗೋಷ್ಠಿ ನಡೆಯಲಿದೆ. ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜುಲೈ 1ರಂದು ಪಂಚಾಕ್ಷರಿ ಗವಾಯಿ ಅವರ ನಾಟ್ಯ ಸಂಘದ ವಜ್ರ ಮಹೋತ್ಸವ ನಡೆಯಲಿದ್ದು,ಅನ್ನದಾನೀಶ್ವರ ಸ್ವಾಮೀಜಿ, ಸಂಗನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.ಪುಟ್ಟರಾಜ ಗವಾಯಿಗಳ 105ನೇ ಜಯಂತ್ಯುತ್ಸವ ಜುಲೈ 2 ರಂದು ಸಂಜೆ 5ಕ್ಕೆ ನಡೆಯಲಿದೆ. ತೋಂಟದಾರ್ಯ ಮಠದ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ’ ಎಂದರು.
‘ಜುಲೈ 3 ರಂದು ಪಂಚಾಕ್ಷರ ಗವಾಯಿ, ಪುಟ್ಟರಾಜ ಗವಾಯಿ ಅವರ ಭಾವಚಿತ್ರ ಮೆರವಣಿಗೆ ನಡೆಯಲಿದೆ. 105 ಸಾಧಕರಿಗೆ ಕುಮಾರಶ್ರೀ ಪ್ರಶಸ್ತಿ ನೀಡಲಾಗುವುದು’ ಎಂದರು.

ವೀರೇಶ್ವರ ಪುಣ್ಯಾಶ್ರಮದ ಅಧ್ಯಕ್ಷ ನಿಂಗಪ್ಪ ಎಸ್. ಕೆಂಗಾರ, ಪ್ರಕಾಶ ಬಸರಿಗಿಡದ, ಪ್ರಭುಲಿಂಗ ಹಿರೇಮಠ, ಶಿವರುದ್ರಪ್ಪ ಇಟಗಿ, ವಸಂತಗೌಡ ಪೊಲೀಸಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.