ನರೇಗಲ್: ‘ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ಜೀವನಕ್ಕೆ ಅವಶ್ಯವಾದ ನೈತಿಕ ಮೌಲ್ಯಗಳನ್ನು ನೀಡಲಾಗುತ್ತದೆ’ ಎಂದು ನಿವೃತ್ತ ಶಿಕ್ಷಕ ಬಿ.ವಿ. ಗೌಡರ ಹೇಳಿದರು.

ಪಟ್ಟಣದ ಬಸ್ ನಿಲ್ದಾಣದ ಎದುರಿನ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೈಹಿಕ ಶಿಕ್ಷಣ ಶಿಕ್ಷಕನಾದ ನಾನು ವೃತ್ತಿ ಜೀವನದಲ್ಲಿ ನರೇಗಲ್ ಮತ್ತು ಹದಲಿ ಶಾಲೆಯ ವಿದ್ಯಾರ್ಥಿಗಳನ್ನು ರಾಜ್ಯ, ರಾಷ್ಟ್ರಮಟ್ಟದ ಕ್ರೀಡೆಗಳಿಗೆ ಕರೆದೊಯ್ಯಲು ಸಾಧ್ಯವಾಯಿತು’ ಎಂದರು.

ಕರವೇ ಜಿಲ್ಲಾ ಘಟಕ ಅಧ್ಯಕ್ಷ ಹನುಮಂತಪ್ಪ ಎಚ್. ಅಬ್ಬಿಗೇರಿ ಮಾತನಾಡಿ, ‘ಸರ್ಕಾರಿ ಶಾಲೆಯ ಶೈಕ್ಷಣಿಕ ಗುಣಮಟ್ಟ ಉತ್ತಮವಾಗಿದೆ’ ಎಂದರು.

ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಸವಿತಕ್ಕ ಮಾತನಾಡಿ, ‘ಮಕ್ಕಳಿಗೆ ಸಾಧ್ಯವಿದ್ದಷ್ಟು ಅಧ್ಯಾತ್ಮ, ನೈತಿಕ ಶಿಕ್ಷಣ ನೀಡಲು ಪ್ರಯತ್ನಿಸಿ’ ಎಂದರು.

ಈ ವೇಳೆ ಚನ್ನಬಸಪ್ಪ ಕುಷ್ಟಗಿ, ನಿವೃತ್ತ ಮುಖ್ಯ ಶಿಕ್ಷಕ ಅರುಣ ಕುಲಕರ್ಣಿ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ಆನಂದ ಕೊಟಗಿ ಅಧ್ಯಕ್ಷತೆ ವಹಿಸಿದ್ದರು. ಮೈಲಾರಪ್ಪ ಚಳ್ಳಮರದ, ತಿಮ್ಮಣ್ಣ ಬಂಡಿವಡ್ಡರ, ಎಂ.ಎಲ್. ಹೊಸಳ್ಳಿ, ಬಸವರಾಜ ಕುರಿ, ಎನ್.ಎಲ್. ಚವ್ಹಾಣ, ಡಿ.ವಿ. ಕಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.