ಗದಗ: ‘ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಸುಧಾರಿಸುವಲ್ಲಿ ವಿನೂತನ ಯೋಜನೆಗಳನ್ನು ಜಾರಿಗೆ ತಂದು ಶಿಕ್ಷಣದ ಗುಣಮಟ್ಟ ಎತ್ತರಿಸುವುದರ ಮೂಲಕ ರಾಜ್ಯದಲ್ಲಿ 27ನೇ ಸ್ಥಾನದಲ್ಲಿದ್ದ ಗದಗ ಜಿಲ್ಲೆಯನ್ನು 17ನೇ ಸ್ಥಾನಕ್ಕೆ ತಂದ ಕೀರ್ತಿ ನಿವೃತ್ತ ಉಪನಿರ್ದೇಶಕ ಎಂ.ಎ. ರಡ್ಡೇರ ಅವರಿಗೆ ಸಲ್ಲುತ್ತದೆ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ನಗರದ ನಿರೀಕ್ಷಣಾ ಮಂದಿರದಲ್ಲಿ ಗದಗ ಜಿಲ್ಲೆಯ ವಿವಿಧ ಶಿಕ್ಷಕ ಸಂಘಟನೆಯವರು ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಎಂ.ಎ. ರಡ್ಡೇರ ಅವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ, ಪ್ರೌಢಶಾಲಾ ಮುಖ್ಯ ಶಿಕ್ಷಕರಾಗಿ, ವಿಷಯ ಪರಿವೀಕ್ಷಕರಾಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಉಪನಿರ್ದೇಶಕರಾಗಿ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಅವಿಸ್ಮರಣೀಯ’ ಎಂದರು.

ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಫ್. ಪೂಜಾರ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ. ಲಮಾಣಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ. ಹಿರೇಮಠ, ಪದವಿಪೂರ್ವ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪವಾಡಿಗೌಡ್ರ ಮಾತನಾಡಿದವರು.

ಇದೇ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ಪಡೆದ ರತ್ನಾ ಬದಿ ಅವರನ್ನು ಸನ್ಮಾನಿಸಲಾಯಿತು. ಶಹರ ಹಾಗೂ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ಎಸ್. ಬುರಡಿ, ವಿ.ವಿ. ನಡುವಿನಮನಿ, ಕೆ.ಬಿ. ಕೊಣ್ಣೂರ, ರವಿರಾಜ ಪವಾರ, ಬಿ.ಬಿ. ಹಡಪದ, ಎ.ಎಸ್. ಪಾಟೀಲ, ಡಿ.ಎನ್. ಮರಡ್ಡಿ, ಎನ್.ಕೆ. ಪಾಟೀಲ, ಬಿ.ಡಿ. ಯರಗುಪ್ಪಿ, ಎಸ್.ಐ. ಮೇಟಿ ಇದ್ದರು.

ಪ್ರಾಚಾರ್ಯ ಅಶೋಕ ಅಂಗಡಿ ನಿರೂಪಣೆ ಮಾಡಿದರು. ನಿವೃತ್ತ ಮುಖ್ಯ ಶಿಕ್ಷಕ ಎನ್.ವಿ. ಜೋಷಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.