ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಘುನಾಥ್ ಚ.ಹ, ವಿಲಾಸ್ ನಾಂದೋಡ್ಕರ್‌ಗೆ ಡಾ.ತೋಂಟದ ಸಿದ್ಧಲಿಂಗಶ್ರೀ ಪುರಸ್ಕಾರ

Published 2 ಜುಲೈ 2024, 9:04 IST
Last Updated 2 ಜುಲೈ 2024, 9:04 IST
ಅಕ್ಷರ ಗಾತ್ರ

ಗದಗ: ಮುಂಡರಗಿ ತಾಲ್ಲೂಕಿನ ಡಂಬಳ ಗ್ರಾಮದ ತೋಂಟದಾರ್ಯ ಪುರಸ್ಕಾರ ಸಮಿತಿ ಲಿಂ. ತೋಂಟದ ಸಿದ್ಧಲಿಂಗ ಶ್ರೀಗಳ ನೆನಪಿನಲ್ಲಿ ನೀಡುವ ರಾಜ್ಯ ಮಟ್ಟದ 'ಡಾ.ತೋಂಟದ ಸಿದ್ಧಲಿಂಗ ಶ್ರೀ ಪುರಸ್ಕಾರ'ಕ್ಕೆ ಸುಧಾ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರಘುನಾಥ ಚ.ಹ. ಹಾಗೂ ಟಿವಿ9 ವಾಹಿನಿಯ ಹಿರಿಯ ಪತ್ರಕರ್ತ ವಿಲಾಸ್ ನಾಂದೋಡ್ಕರ್ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹5 ಸಾವಿರ ನಗದು, ಫಲಕ ಒಳಗೊಂಡಿದೆ.

ಗದಗ ನಗರದ ತೋಂಟದಾರ್ಯ ಮಠದಲ್ಲಿ ಜುಲೈ ಮೂರನೇ ವಾರದಲ್ಲಿ ನಡೆಯುವ ಶಿವಾನುಭವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪುರಸ್ಕಾರ ಸಮಿತಿಯ ಸಂಚಾಲಕರಾದ ಡಾ. ಶಶಿಧರ್ ತೋಡ್ಕರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT