ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರಗುಂದದಲ್ಲಿ ಸಿಡಿಲು ಬಡಿದು ಮಹಿಳೆ ಸಾವು

Last Updated 16 ಅಕ್ಟೋಬರ್ 2018, 12:37 IST
ಅಕ್ಷರ ಗಾತ್ರ

ಗದಗ: ಕಳೆದೊಂದು ತಿಂಗಳಿಂದ ಬಿಸಿಲಿನ ಧಗೆಯಿಂದ ತತ್ತರಿಸಿದ್ದ ಜಿಲ್ಲೆಯಲ್ಲಿ ಮಂಗಳವಾರ ಗುಡುಗು,ಮಿಂಚು ಸಹಿತ 1 ಗಂಟೆ ಮಳೆ ಆರ್ಭಟಿಸಿತು. ರೋಣ, ಮುಂಡರಗಿ, ಲಕ್ಷ್ಮೇಶ್ವರ, ಗಜೇಂದ್ರಗಡ ತಾಲ್ಲೂಕು ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗಿದೆ. ಗದಗ, ನರೇಗಲ್‌ ಹೋಬಳಿ ವ್ಯಾಪ್ತಿಯಲ್ಲಿ ಸಾಮಾನ್ಯ ಮಳೆ ಸುರಿದಿದೆ.

ನರಗುಂದ ತಾಲ್ಲೂಕಿನ ಹದಲಿ ಗ್ರಾಮದಲ್ಲಿ ಜಮೀನಿನಲ್ಲಿ ಹತ್ತಿ ಬಿಡಿಸುತ್ತಿದ್ದ ಮಹಿಳೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ವೆಂಕವ್ವ ಯಲ್ಲಪ್ಪ ವಿಠಪ್ಪನವರ (35) ಮೃತ ಮಹಿಳೆ. ನರಗುಂದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆ ಕೊರತೆಯಿಂದಾಗಿ ಜಿಲ್ಲೆಯಾದ್ಯಂತ ಹಿಂಗಾರು ಹಂಗಾಮಿನ ಈರುಳ್ಳಿ, ಶೇಂಗಾ, ಗೋವಿನಜೋಳ ಮೆಣಸಿನಕಾಯಿ ಬೆಳೆಗಳು ಒಣಗಲು ಪ್ರಾರಂಭಿಸಿದ್ದವು. ರೈತರು ಬೆಳೆಯ ಆಸೆಯನ್ನೇ ಕೈಬಿಟ್ಟಿದ್ದರು. ಮತ್ತೆ ಮಳೆಯಾಗಿರುವುದರಿಂದ ಹೊಸ ಭರವಸೆ ಮೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT