ಮಂಗಳವಾರ, ಆಗಸ್ಟ್ 11, 2020
23 °C

ದಿನವಿಡೀ ಬಿಸಿಲಿನ ಧಗೆ; ಸಂಜೆ ಆಲಿಕಲ್ಲು ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗದಗ: ದಿನವಿಡೀ ಬಿಸಿಲ ಧಗೆಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆಗೆ ಗುರುವಾರ ಸಂಜೆ ಸುರಿದ ಧಾರಾಕಾರ ಮಳೆ ತಂಪೆರೆಯಿತು. ನರೇಗಲ್‌, ಮುಳಗುಂದ, ನರಗುಂದ ಮತ್ತು ಲಕ್ಷ್ಮೇಶ್ವರ ತಾಲ್ಲೂಕಿನ ಯಳವತ್ತಿಯಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಸುರಿಯಿತು. ಮುಂಡರಗಿ, ಡಂಬಳ, ಗಜೇಂದ್ರಗಡ, ರೋಣದಲ್ಲಿ ಗುಡುಗು, ಮಿಂಚು ಸಹಿತ 1 ಗಂಟೆ ಮಳೆ ಆರ್ಭಟಿಸಿತು.

ಕಳೆದೊಂದು ವಾರದಿಂದ ಮಳೆ ಬಿಡುವು ನೀಡಿದ್ದರಿಂದ ಜಿಲ್ಲೆಯಲ್ಲಿ ಮತ್ತೆ ಸಂಪೂರ್ಣ ಬೇಸಿಗೆಯ ವಾತಾವರಣ ಸೃಷ್ಟಿಯಾಗಿತ್ತು. ಗುರುವಾರ ಮಧ್ಯಾಹ್ನ 38 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿತ್ತು. ಸಂಜೆ 5 ಗಂಟೆ ವೇಳೆಗೆ ಆಗಸದಲ್ಲಿ ಕರಿ ಮೋಡಗಳು ದಟ್ಟೈಸಿ, ಕತ್ತಲು ಕವಿದಿದ್ದರಿಂದ ವಾಹನ ಸವಾರರು ಹೆಡ್‌ಲೈಟ್‌ ಹಾಕಿಕೊಂಡು ಸಂಚರಿಸಿದರು.

ಸಂಜೆ ರಭಸವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ ವೆಂಕಟೇಶ ಚಿತ್ರಮಂದಿರದ ರಸ್ತೆ ಮತ್ತು ಹಾತಲಗೇರಿ ನಾಕಾದ ಬಳಿ ಚರಂಡಿ ನೀರು ಉಕ್ಕಿ ರಸ್ತೆಗೆ ಹರಿಯಿತು.ಝೇಂಡಾ ವೃತ್ತ ಮತ್ತು ಹಳೆಯ ಜಿಲ್ಲಾಧಿಕಾರಿ ಕಚೇರಿ ವೃತ್ತವು ಜಲಾವೃತಗೊಂಡು, ದ್ವಿಚಕ್ರ ವಾಹನ ಸವಾರರು ಪರದಾಡಿದರು.

ರೈತರಲ್ಲಿ ಮೂಡಿದ ಭರವಸೆ: ಮಳೆ ಕೊರತೆಯಿಂದಾಗಿ ಜಿಲ್ಲೆಯಾದ್ಯಂತ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಆರಂಭಕ್ಕೆ ಹಿನ್ನಡೆಯಾಗಿತ್ತು. ಈಗ ಮಳೆ ಸುರಿದಿರುವುದರಿಂದ ರೈತರಲ್ಲಿ ಭರವಸೆ ಮೂಡಿದೆ. ಇದೇ ರೀತಿ ಇನ್ನೊಂದೆರಡು ಉತ್ತಮ ಮಳೆ ಲಭಿಸಿದರೆ ಬಿತ್ತನೆ ಪ್ರಾರಂಭಿಸಬಹುದು ಎನ್ನುತ್ತಾರೆ ರೈತರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು