ಗದಗ: ‘ತಾಲ್ಲೂಕಿನಲ್ಲಿ ಪಡಿತರ ಚೀಟಿ ಪಡೆಯಲು ಅರ್ಹರಿರುವ ಫಲಾನುಭವಿಗಳ ಸಮೀಕ್ಷೆಯನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ಯಾರಂಟಿ ಸಮಿತಿ ಸದಸ್ಯರು ಜಂಟಿಯಾಗಿ ನಡೆಸಬೇಕು’ ಎಂದು ಗದಗ ತಾಲ್ಲೂಕು ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದರು.

ಜಿಲ್ಲಾ ಪಂಚಾಯಿತಿಯ ವಿಸಿ ಹಾಲ್ನಲ್ಲಿ ಸೋಮವಾರ ನಡೆದ ತಾಲ್ಲೂಕುಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ರಾಜ್ಯ ಸರ್ಕಾರದಿಂದ ಜಾರಿಯಾಗಿರುವ ಪಂಚಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು, ಈ ಯೋಜನೆಗಳ ಸೌಲಭ್ಯವನ್ನು ಅರ್ಹರಿಗೆ ತಲುಪಿಸುವಲ್ಲಿ ವಿಳಂಬವಾಗಬಾರದು. ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಶೇ 100ರಷ್ಟು ಸಾಧಿಸಲು ಸಂಬಂಧಪಟ್ಟ ಅಧಿಕಾರಿಗಳು ಆಸಕ್ತಿಯಿಂದ ಕಾರ್ಯನಿರ್ವಹಿಸಬೇಕು’ ಎಂದರು.

ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ಮಾತನಾಡಿ, ‘ಪಂಚ ಗ್ಯಾರಂಟಿ ಯೋಜನೆ ತಲುಪಿಸುವಲ್ಲಿ ಫಲಾನುಭವಿಗಳಿಗೆ ಯಾವುದೇ ಅಡಚಣೆಗಳು ಉಂಟಾದರೆ, ಅಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಆದ್ದರಿಂದ ಪ್ರತಿ ಮೂರು ಪಂಚಾಯಿತಿ ಸೇರಿಸಿ ಜನಸ್ಪಂದನ ಸಭೆ ಮಾಡಲಾಗುವುದು’ ಎಂದರು.

‘ಗ್ರಾಮೀಣ ಭಾಗದ ಅಧಿಕಾರಿಗಳು ಪಿಡಿಒ ಸೇರಿದಂತೆ ಸ್ಥಳದಲ್ಲಿಯೇ ಸಮಸ್ಯೆಗೆ ಸ್ಪಂದಿಸಬೇಕು. ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಜಿಲ್ಲೆಯ ವಿವಿಧ ಬಸ್ ನಿಲ್ದಾಣಗಳಿಗೆ ವಾರಕ್ಕೊಮ್ಮೆ ಭೇಟಿ ನೀಡಿ ಅಲ್ಲಿನ ಮೂಲಸೌಕರ್ಯ ಸೇರಿದಂತೆ ಸ್ವಚ್ಛತೆಯ ಕುರಿತು ನಿಗಾ ವಹಿಸಬೇಕು’ ಎಂದು ಸೂಚಿಸಿದರು.

ಸಭೆಗೂ ಮುನ್ನ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನದ ಪ್ರಸ್ತಾವನೆಯನ್ನು ಜಿಲ್ಲಾ ಸಮಿತಿ ಸದಸ್ಯ ಶರೀಫ್ ಬಿಳೆಯಲಿ ಬೋಧಿಸಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಉಪಾಧ್ಯಕ್ಷೆ ನೀಲಮ್ಮ ಬೋಳನವರ, ಸದಸ್ಯರಾದ ಈರಣ್ಣ ಹುಣಸಿಕಟ್ಟಿ, ತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯರಾದ ದಯಾನಂದ ಪವಾರ, ಶಂಭು ಕಾಳೆ, ಸಾವಿತ್ರಿ ಹೂಗಾರ ಸೇರಿದಂತೆ ಹಲವರು ಇದ್ದರು.

ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಪ್ರಾಮಾಣಿಕತೆ ಇರಬೇಕು. ಪಂಚಗ್ಯಾರಂಟಿ ಯೋಜನೆಯ ಮಹತ್ವ ಅರ್ಥೈಸಿಕೊಳ್ಳುವುದು ಹಾಗೂ ಅರ್ಹರಿಗೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿ
ಅಶೋಕ ಮಂದಾಲಿ ಗದಗ ತಾಲ್ಲೂಕು ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ

ತಾಲ್ಲೂಕಿನ ಪ್ರಗತಿಯ ಮಾಹಿತಿ

ಗದಗ ತಾಲ್ಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಶೇ 99.42ರಷ್ಟು ಪ್ರಗತಿ ಸಾಧಿಸಲಾಗಿದೆ. ಅದೇರೀತಿ ತಾಲ್ಲೂಕಿನಲ್ಲಿ 33558 ಪಡಿತರ ಕಾರ್ಡ್ಗಳಿದ್ದು (ಅಂತ್ಯೋದಯ ಬಿಪಿಎಲ್) ಅನ್ನಭಾಗ್ಯ ಯೋಜನೆಯಡಿ 5536.05 ಕ್ವಿಂಟಲ್ ಅಕ್ಕಿ ಹಂಚಿಕೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ ಶೇ 99.63 ಪ್ರಗತಿಯಾಗಿದೆ. ಯುವನಿಧಿ ಯೋಜನೆಯಡಿ ಗದಗ ತಾಲ್ಲೂಕಿನಲ್ಲಿ ಆಗಸ್ಟ್ 31ರವರೆಗೆ 2231 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು ಅದರಲ್ಲಿ 1761 ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.