ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ವಿರುದ್ಧ ಜನಜಾಗೃತಿ: ರವಿವರ್ಮಕುಮಾರ್

Last Updated 21 ಏಪ್ರಿಲ್ 2019, 11:44 IST
ಅಕ್ಷರ ಗಾತ್ರ

ಗದಗ: ‘ರಾಜಕಾರಣದಲ್ಲಿ ಧರ್ಮ ಬೆರೆಸುತ್ತಿರುವ ಮತ್ತು ಸಂವಿಧಾನವನ್ನು ಸಂಪೂರ್ಣವಾಗಿ ನಾಶಮಾಡಲು ಹೊರಟಿರುವ ಬಿಜೆಪಿ ವಿರುದ್ಧ ಮತ ನೀಡುವಂತೆ ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ’ ಎಂದು ನಿವೃತ್ತ ಅಡ್ವೋಕೇಟ್ ಜನರಲ್ ರವಿವರ್ಮಕುಮಾರ್‌ ಹೇಳಿದರು.

ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಕಳೆದ ಐದು ವರ್ಷಗಳ ಆಡಳಿತಾವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಒಮ್ಮೆಯೂ ಸುದ್ದಿಗೋಷ್ಠಿ ನಡೆಸಿಲ್ಲ. ಮಾಧ್ಯಮಗಳಿಗೆ ಪ್ರಶ್ನಸಿಸುವ ಅಧಿಕಾರವನ್ನೇ ನೀಡಿಲ್ಲ. ದೇಶದಲ್ಲಿ ಸಂವಿಧಾನ, ಮಾಧ್ಯಮ ಸ್ವಾತಂತ್ರ್ಯಕ್ಕೆ ಗಂಡಾಂತರ ಬಂದಿದೆ’ ಎಂದು ದೂರಿದರು.

‘ರಾಜಕೀಯದಲ್ಲಿ ಧರ್ಮ ಬೆರಸಿ ಬಿಜೆಪಿ ಜನರನ್ನು ಭಾವನಾತ್ಮಕವಾಗಿ ಕೆರಳಿಸುತ್ತಿದೆ. ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಅನಂತಕುಮಾರ ಹೆಗಡೆಗೆ ಸಂಪುಟದಲ್ಲಿ ಸ್ಥಾನ, ಸಾಧ್ವಿ ಪ್ರಜ್ಞಾಸಿಂಗ್‌ ಅವರಿಗೆ ಲೋಕಸಭೆ ಟಿಕೆಟ್‌ ನೀಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಿದ್ದಾರೆ. ಇದರ ವಿರುದ್ಧ ನಾವು ಜನಜಾಗೃತಿ ಮಾಡುತ್ತಿದ್ದೇವೆಯೇ ಹೊರತು, ನಾವು ಯಾವುದೇ ಪಕ್ಷದ ಪರ ಪ್ರಚಾರ ಮಾಡುತ್ತಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್. ಪಾಟೀಲ ಅವರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟವರು. ಜತೆಗೆ ಸಂವಿಧಾನಕ್ಕೆ ತಲೆಬಾಗುವವರು.ಕ್ಷೇತ್ರದ ಮತದಾರರು ಅವರನ್ನು ಗೆಲ್ಲಿಸುವಂತೆ’ ರಾಷ್ಟ್ರೀಯ ಜಲತಜ್ಞ ರಾಜೇಂದ್ರಸಿಂಗ್ ಮನವಿ ಮಾಡಿದರು.ಗುರಣ್ಣ ಬಳಗಾನೂರ, ಜೆ.ಕೆ. ಜಮಾದಾರ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT