ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಟ್ಟರಾಜ ಗವಾಯಿಗಳವರ 11ನೇ ಪುಣ್ಯಸ್ಮರಣೋತ್ಸವ ನಾಳೆ

Last Updated 15 ಸೆಪ್ಟೆಂಬರ್ 2021, 5:22 IST
ಅಕ್ಷರ ಗಾತ್ರ

ಗದಗ: ಗಾನಯೋಗಿ ಪಂ. ಪುಟ್ಟರಾಜ ಸೇವಾ ಸಮಿತಿ ವತಿಯಿಂದ ಸೆ. 16ರಂದು ಶಿವಯೋಗಿ ಡಾ. ಪಂ.ಪುಟ್ಟರಾಜ ಕವಿ ಗವಾಯಿಗಳವರ 11ನೇ ಪುಣ್ಯಸ್ಮರಣೋತ್ಸವ, ಶಿವಯೋಗಿ ಪುಟ್ಟರಾಜ ಪ್ರಶಸ್ತಿ ಪ್ರದಾನ ಹಾಗೂ ಅಹೋರಾತ್ರಿ ಸಂಗೀತ ಸ್ವರನಮನ ಕಾರ್ಯಕ್ರಮ ನಡೆಯಲಿದೆ.

ಅಂದುಬೆಳಿಗ್ಗೆ 10.30ಕ್ಕೆ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ನಡೆಯುವ ಪುಣ್ಯಸ್ಮರಣೋತ್ಸವದಲ್ಲಿ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಿವಾನಂದ ಮಠದ ಸದಾಶಿವಾನಂದ ಸ್ವಾಮೀಜಿ ಹಾಗೂ ರಾಜೂರು-ಅಡ್ನೂರು-ಗದಗ ದಾಸೋಹಮಠದ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸುವರು. ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಅಧ್ಯಕ್ಷತೆ ವಹಿಸುವರು. ಕೊಪ್ಪಳ ಜಂಗಮಾಭಿವೃದ್ದಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಷಡಕ್ಷರಯ್ಯ ನವಲಿಹಿರೇಮಠ ಕಾರ್ಯಕ್ರಮ ಉದ್ಘಾಟಿಸುವರು.

ಸಚಿವ ಬಿ.ಶ್ರೀರಾಮುಲು ಆಪ್ತಸಹಾಯಕ ಎಸ್.ಎಚ್.ಶಿವನಗೌಡ್ರ ಪ್ರಶಸ್ತಿ ಪ್ರದಾನ ಮಾಡುವರು. ಮುಖ್ಯ ಅತಿಥಿಗಳಾಗಿ ಬಿಜೆಪಿ ಯುವ ಮುಖಂಡ ಅನಿಲ್ ಮೆಣಸಿನಕಾಯಿ, ರಾಜಣ್ಣ ಕುರಡಗಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.

ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪಂಡಿತ ಫಕ್ಕಿರೇಶ ಕಣವಿ, ಪೌರೋಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಎಂ.ಎಸ್.ಶಶಿಧರ ಶಾಸ್ತ್ರಿ ಹಾಗೂ ಜನಪದ ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಬೆಂಗಳೂರಿನ ಜನಪದ ಅಕಾಡೆಮಿಯ ಅಧ್ಯಕ್ಷೆ ಬಿ.ಮಂಜಮ್ಮ ಅವರಿಗೆ ಶಿವಯೋಗಿ ಶ್ರೀ ಪುಟ್ಟರಾಜ ಪ್ರಶಸ್ತಿ ಪ್ರಧಾನ ಮಾಡಲಾಗುವುದು.

ನಂತರ ವಿರೇಶ್ವರ ಪುಣ್ಯಾಶ್ರಮದ ಶಿಷ್ಯರಿಂದ, ಕುಮಾರೇಶ್ವರ ಕೃಪಾಪೋಷಿತ ಪಂ.ಪಂಚಾಕ್ಷರಿ ಗವಾಯಿಗಳವರ ಸಂಗೀತ ಪಾಠಶಾಲೆ, ಪಂ. ಪಂಚಾಕ್ಷರಿ ಗವಾಯಿಗಳವರ ಸಂಗೀತ ಮಹಾವಿದ್ಯಾಲಯ ಹಾಗೂ ಪಂ. ಪಂಚಾಕ್ಷರಿ ಗವಾಯಿಗಳವರ ಅಂಧರ ವಸತಿಯುತ ಸಂಗೀತ ಶಾಲೆಯ ಸಿಬ್ಬಂದಿ ವರ್ಗದವರಿಂದ ಅಹೋರಾತ್ರಿ ಸಂಗೀತ ಸ್ವರನಮನ ಕಾರ್ಯಕ್ರಮ ನಡೆಯಲಿದೆ ಎಂದು ಪತ್ರಿಕಾ ಕಾರ್ಯದರ್ಶಿ ಬಸವರಾಜ ಹೊನ್ನಿಗನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT