ಗುಂಪು ವಸತಿ ಯೋಜನೆ ಜಾರಿಗೆ ಆಗ್ರಹ
‘ವಸತಿ ರಹಿತ ಅಸಂಘಟಿತ ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಸತಿ ಯೋಜನೆಗಳನ್ನು ಬಳಸಿಕೊಂಡು ಸೂಕ್ತ ಗುಂಪು ವಸತಿ ಯೋಜನೆಗಳನ್ನು ಜಾರಿಮಾಡಬೇಕು’ ಎಂದು ಸಹ ಸಂಚಾಲಕ ಮಾರುತಿ ಚಿಟಗಿ ಒತ್ತಾಯಿಸಿದರು. ‘ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿಗೊಳಿಸಬೇಕು. ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ರಾಜ್ಯದಲ್ಲಿ ರೈತ ವಿರೋಧಿ ತಿದ್ದಪಡಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.