ಮಂಗಳವಾರ, ಅಕ್ಟೋಬರ್ 20, 2020
25 °C

ಗದಗ: ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಮಾಜಿ ಸೈನಿಕ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

retired soldier from gadag

ಗದಗ: ‘ಕುಟುಂಬ ಸಮೇತರಾಗಿ ದಯಾಮರಣ ಹೊಂದಲು ಅವಕಾಶ ಮಾಡಿಕೊಡಬೇಕು’ ಎಂದು ಕೋರಿ ಲಕ್ಷ್ಮೇಶ್ವರದ ಮಾಜಿ ಸೈನಿಕ ಈರಣ್ಣ ಬ.ಅಣ್ಣಿಗೇರಿ ಅವರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮಂಗಳವಾರ ಮನವಿ ಸಲ್ಲಿಸಿದ್ದಾರೆ.

‘17 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ, 2019ರಲ್ಲಿ ನಿವೃತ್ತನಾಗಿದ್ದೇನೆ. ಹುಟ್ಟೂರಾದ ಬಾಲೇಹೊಸೂರಿನಲ್ಲಿ ಸ್ವಂತ ಮನೆ ಇಲ್ಲದ ಕಾರಣ ಈ ಹಿಂದೆ ಲಕ್ಷ್ಮೇಶ್ವರದಲ್ಲಿ ಖರೀದಿಸಿದ ನಿವೇಶನದಲ್ಲಿ ಮನೆ ಕಟ್ಟಲು ಆರಂಭಿಸಿದ್ದೆ. ಆದರೆ, ಕೆಲವರು ದುರದ್ದೇಶದಿಂದ ಕಟ್ಟಡ ಕಾಮಗಾರಿ ನಡೆಸಲು ಅಡ್ಡಿಪಡಿಸುತ್ತಿದ್ದಾರೆ’ ಎಂದು ಅವರು ದೂರಿದ್ದಾರೆ.

‘ಸೈನ್ಯ ಸೇರಲು ಆಸಕ್ತಿ ಇರುವ ಗ್ರಾಮೀಣ ಭಾಗದ ಯುವಕರಿಗೆ ಮಾರ್ಗದರ್ಶನ ನೀಡಲು ಉಚಿತ ತರಬೇತಿ ಕೇಂದ್ರ ಹಾಗೂ ಮಕ್ಕಳ ಶಿಕ್ಷಣಕ್ಕಾಗಿ ಲಕ್ಷ್ಮೇಶ್ವರದ ಈಶ್ವರ ನಗರದಲ್ಲಿ ಮನೆ ನಿರ್ಮಿಸುತ್ತಿದ್ದೇನೆ. ಕೆಲವರು ಸುಳ್ಳು ದೂರು ನೀಡಿ ಕಾಮಗಾರಿಗೆ ತಡೆಯೊಡ್ಡಿದ್ದಾರೆ. ಮನೆಗೆ ಗೂಂಡಾಗಳನ್ನು ಕಳುಹಿಸಿ ಮಾನಸಿಕ ಕಿರುಕುಳ ಕೊಡುವುದರ ಜತೆಗೆ, ಜೀವ ಬೆದರಿಕೆ ಹಾಕುತ್ತಿದ್ದಾರೆ’ ಎಂದು ಈರಣ್ಣ ಆರೋಪಿಸಿದ್ದಾರೆ.

ಇದನ್ನೂ ಓದಿ: 

‘ನಮ್ಮ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು. ಮುಂದಿನ ಹತ್ತು ದಿನಗಳ ಒಳಗಾಗಿ ನಮಗೆ ನ್ಯಾಯ ದೊರಕಿಸಿಕೊಡಬೇಕು. ಇಲ್ಲವಾದರೆ ದಯಾಮರಣಕ್ಕೆ ಅವಕಾಶ ನೀಡುವವರೆಗೂ ಜಿಲ್ಲಾಧಿಕಾರಿ ಕಚೇರಿ ಎದುರು ಕುಟುಂಬ ಸಮೇತರಾಗಿ ಧರಣಿ ಕೂರುತ್ತೇವೆ’ ಎಂದು ಅವರು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು