ರಸ್ತೆ ಕಾಮಗಾರಿಗೆ ಚಾಲನೆ

7

ರಸ್ತೆ ಕಾಮಗಾರಿಗೆ ಚಾಲನೆ

Published:
Updated:
ಮುಂಡರಗಿ ತಾಲ್ಲೂಕಿನ ಬೂದಿಹಾಳ ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ರಾಮಣ್ಣ ಲಮಾಣಿ ಭೂಮಿಪೂಜೆ ನೆರವೇರಿಸಿದರು

ಮುಂಡರಗಿ: ‘ಮುಂಡರಗಿ, ಶಿರಹಟ್ಟಿ, ಲಕ್ಷ್ಮೇಶ್ವರ ಸೇರಿ ಶಿರಹಟ್ಟಿ ಮತಕ್ಷೇತ್ರದ ಗ್ರಾಮೀಣ ಭಾಗಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿ ಶಿರಹಟ್ಟಿ ಮತ ಕ್ಷೇತ್ರವನ್ನು ಮಾದರಿ ಮತಕ್ಷೇತ್ರವನ್ನಾಗಿಸಲು ಪ್ರಯತ್ನಿಸುತ್ತೇನೆ’ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ತಾಲ್ಲೂಕಿನ ಕೊರ್ಲಹಳ್ಳಿ ಗ್ರಾಮದ ಪಿ.ಎಂ.ಜಿ.ಎಸ್‌.ಐ ಯೋಜನೆಯಡಿ ₹ 15 ಲಕ್ಷ ವೆಚ್ಚದ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿ, ‘ಗ್ರಾಮೀಣ ಪ್ರದೇಶದಲ್ಲಿ ಮೂಲಸೌಲಭ್ಯ ಕಲ್ಪಿಸಲಾಗುವುದು’ ಎಂದರು.

ತಾಲ್ಲೂಕಿನ ಬೂದಿಹಾಳ ಗ್ರಾಮದಲ್ಲಿ ಪಿ.ಎಂ.ಜಿ.ಎಸ್‌.ಐ ಯೋಜನೆಯಡಿ ₹ 10 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಅವರು ಚಾಲನೆ ನೀಡಿದರು.

ಜಿಲ್ಲಾ ಪಂಚಾಯ್ತಿ ಸದಸ್ಯೆ ಶೋಭಾ ಮೇಟಿ, ಕೊರ್ಲಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಹುಲಿಗೆವ್ವ ಕಿತ್ತೂರ, ಬೀಡನಾಳ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಹುಲಿಗೆವ್ವ ಕಟಗಿ, ಮುಖಂಡರಾದ ಕರಬಸಪ್ಪ ಹಂಚಿನಾಳ, ಆನಂದಗೌಡ ಪಾಟೀಲ, ಡಾ.ಕುಮಾರಸ್ವಾಮಿ ಹಿರೇಮಠ, ಡಾ.ಬಿ.ಎಸ್.ಮೇಟಿ, ಮಂಜುನಾಥಗೌಡ ಪಾಟೀಲ, ರಮೇಶ ಹುಳಕಣ್ಣವರ, ರಂಗಪ್ಪ ಕ್ಯಾದಗಿಹಳ್ಳಿ, ಪ್ರಶಾಂತ ಗುಡದಪ್ಪನವರ, ಕೊಪ್ಪಣ್ಣ ಕೊಪ್ಪಣ್ಣವರ, ದೇವು ಹಡಪದ, ಶಂಕರಗೌಡ ಪಾಟೀಲ, ಬಾಬಣ್ಣ ಚೆನ್ನಳ್ಳಿ, ಬಿ.ಎಫ್.ಈಟಿ, ಸುನೀತಾ ಸಂಜೀವಪ್ಪನವರ, ತೋಟಪ್ಪ ಲಿಂಬಿಕಾಯಿ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !