ರೋಣ: ‘ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಬಾರಿ ಶಾಸಕನಿದ್ದಾಗ ವಾಲ್ಮೀಕಿ ಭವನ ಸೇರಿದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯ ಭವನಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದೆ. ಅವು ಪೂರ್ಣಗೊಳ್ಳದಿರುವುದಕ್ಕೆ ಈ ಹಿಂದಿನ (ಬಿಜೆಪಿ) ಸರ್ಕಾರವೇ ಕಾರಣ’ ಎಂದು ಶಾಸಕ ಜಿ.ಎಸ್.ಪಾಟೀಲ ಆರೋಪಿಸಿದರು.

ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಭಾನುವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯ ಭವನಗಳ ನಿರ್ಮಾಣಕ್ಕೆ ಈಗಿನ ಸರ್ಕಾರದಿಂದ ಹಣ ಮಂಜೂರಾಗಿದೆ. ಶೀಘ್ರವೇ ನಿರ್ಮಾಣ ಕಾರ್ಯ ಪ್ರಾರಂಭಗೊಳ್ಳಲಿದೆ. ಹೆಚ್ಚಿನ ಅನುದಾನ ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಕಾಂಗ್ರೆಸ್ ಎಸ್.ಸಿ ಘಟಕದ ಜಿಲ್ಲಾಧ್ಯಕ್ಷ ಬಸವರಾಜ ಕಡೆಮನಿ ಮಾತನಾಡಿ, ‘ಶಾಸಕ ಜಿ.ಎಸ್. ಪಾಟೀಲ ಅವರು ಬಡವರು ಮತ್ತು ದಲಿತರ ಪರ ಗಟ್ಟಿ ಧ್ವನಿಯಾಗಿದ್ದಾರೆ. ಅರ್ಹ ಫಲಾನುಭವಿಗಳಿಗೆ ಸವಲತ್ತುಗಳು ತಲುಪಬೇಕು ಎಂಬುದು ಅವರ ಆಶಯವಾಗಿದೆ. ಅದಕ್ಕಾಗಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗೆ ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತಿದ್ದಾರೆ’ ಎಂದು ಹೇಳಿದರು.

ಮಹರ್ಷಿ ವಾಲ್ಮೀಕಿ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ತಳವಾರ ಮಾತನಾಡಿ, ‘2012ರಲ್ಲಿ ಶಾಸಕ ಜಿ.ಎಸ್. ಪಾಟೀಲ ಅವರು ತಾಲ್ಲೂಕಿನಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ₹1.12 ಕೋಟಿ ಮಂಜೂರು ಮಾಡಿಸಿ, ನಿರ್ಮಾಣ ಕಾರ್ಯ ಪ್ರಾರಂಭಿಸಿದ್ದರು. ಈಗ ₹1 ಕೋಟಿ ಮಂಜೂರು ಮಾಡಿಸಿದ್ದಾರೆ. ಕಾಮಗಾರಿಯನ್ನು ಅಚ್ಚುಕಟ್ಟಾಗಿ ಮತ್ತು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಸಮಾಜದವರಿಗೆ ಇದರಿಂದ ತುಂಬಾ ಅನುಕೂಲವಾಗಲಿದೆ’ ಎಂದರು.

₹2 ಕೋಟಿ ವೆಚ್ಚದಲ್ಲಿ ಬಾಬು ಜಗಜೀವನ್ ರಾಂ ಸಮುದಾಯ ಭವನ, ₹1 ಕೋಟಿ ವೆಚ್ಚದಲ್ಲಿ ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ಹಾಗೂ ₹1 ಕೋಟಿ ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ, ಸಿಪಿಐ ವಿಜಯಕುಮಾರ ನಾಯಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಣ್ಣ ಶೆಟ್ಟರ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವಿ.ಬಿ. ಸೋಮನಕಟ್ಟಿಮಠ, ಸುರೇಶ ಮಾಗಡಿ, ಹನುಮಂತಪ್ಪ ದ್ವಾಸಲ, ಆನಂದ ಸಿಂಗಾಡಿ, ಹನುಮಂತಪ್ಪ ನಾಗರಾಜ, ಭೀಮಣ್ಣ ತಳವಾರ, ದೇವೇಂದ್ರಪ್ಪ ಕೊಳ್ಳಪ್ಪನವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-23-1042846026

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.