ರೋಣ: ಈಚೆಗೆ ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣ ಒಂದನ್ನು ಬೇಧಿಸುವಲ್ಲಿ ರೋಣ ಪೊಲೀಸರು ಯಶಸ್ವಿಯಾಗಿದ್ದಾರೆ.

ಮುಶಿಗೇರಿ ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿ ದಯಾನಂದ ಜಂಬಗಿ ಬಯಲು ಬಹಿರ್ದೆಸೆಗೆ ತೆರಳಿದ ಸಂದರ್ಭದಲ್ಲಿ ಜಿಗಳೂರು ದೊಡ್ಡ ಕೆರೆಯ ಹತ್ತಿರ ಮೂವರು ದರೋಡೆಕೋರರು ಮಾರಕಾಸ್ತ್ರಗಳಿಂದ ಬೆದರಿಸಿ ₹ 45,280 ಫೋನ್ ಪೇ ಮಾಡಿಸಿಕೊಂಡಿದ್ದರು. ಅವರ ಬಜಾಜ್ ಪಲ್ಸರ್ ದ್ವಿಚಕ್ರ ವಾಹನವನ್ನು ದೋಚಿಕೊಂಡು ಹೋಗಿದ್ದರು. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳಾದ ಹನುಮಂತ ಗಂಗಪ್ಪ ತಂಗಳ (25), ಪರಶು ಯಲ್ಲಪ್ಪ ವೈದ್ಯ (23) ಹಾಗೂ ದುರಗೇ ಭೀಮಪ್ಪ ಕುಂಚಿಕೊರವರ (25) ಎಂಬವರನ್ನು ಪೊಲೀಸರು ಬಂಧಿಸಿದ್ದು ₹ 1,49,500 ಮೌಲ್ಯದ ಎರಡು ದ್ವಿಚಕ್ರ ವಾಹನ, ನಗದು, ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರ ಮೇಲೆ ಹುಬ್ಬಳ್ಳಿ ಕೇಶ್ವಾಪುರ ಪೊಲೀಸ್ ಠಾಣೆ, ಕುಷ್ಟಗಿ ಪೊಲೀಸ್ ಠಾಣೆಗಳಲ್ಲಿ ಡಕಾಯಿತಿ ಪ್ರಕರಣಗಳು ದಾಖಲಾಗಿರುವ ಕುರಿತು ಪೊಲೀಸರಿಗೆ ಮಾಹಿತಿ ದೊರೆತಿದೆ ಎಂದು ನರಗುಂದ ಡಿ.ವೈ.ಎಸ್ಪಿ ಪ್ರಭುಗೌಡ ಕಿರೇದಳ್ಳಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಪ್ರಕರಣ ಬೇಧಿಸಲು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಹಾಗೂ ಹೆಚ್ಚುವರಿ ಗದಗ ಜಿಲ್ಲಾ ಪೊಲೀಸ್ ಅಧಿಕ್ಷಕ ಎಂ.ಬಿ. ಸುಂಕದ, ನರಗುಂದ ಡಿ.ವೈ.ಎಸ್.ಪಿ ಪ್ರಭುಗೌಡ ಕಿರೇದಳ್ಳಿ ಮಾರ್ಗದರ್ಶನದಲ್ಲಿ ರೋಣ ಸಿಪಿಐ ಎಸ್.ಎಸ್.ಬೀಳಗಿ ರೋಣ ಠಾಣೆ ಪಿಎಸ್ಐ ಪ್ರಕಾಶ ಬಣಕಾರ, ಗಜೇಂದ್ರಗಡ ಠಾಣೆ ಪಿಎಸ್ಐ ಸೋಮನಗೌಡ ಗೌಡರ, ನರೇಗಲ್ ಠಾಣೆ ಪಿಎಸ್ಐ ಐಶ್ವರ್ಯ ನಾಗರಾಳ ಸಿಬ್ಬಂದಿಗಳಾದ ಹನುಮಪ್ಪ ಶಂಕ್ರಿ, ಎಂ.ಬಿ.ವಡ್ಡಟ್ಟಿ, ಮಂಜುನಾಥ ಕುರಿ, ಕುಮಾರ ತಿಗರಿ, ಮಂಜುನಾಥ ಬಂಡಿವಡ್ಡರ, ಶಿವಕುಮಾರ ಹುಬ್ಬಳ್ಳಿ, ಮುತ್ತಪ್ಪ ಭಾವಿ, ಡಿ.ಎಂ.ಚಿತ್ರಗಾರ, ಕಿರಣ ಹಿರೇಮಠ, ಸದಾಶಿವ ಕದಂ, ಹನುಮಂತ ಹುಲ್ಲೂರ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿಗಳಾದ ಗುರುರಾಜ ಬೂದಿಹಾಳ, ಸಂಜೀವ ಕೊರಡೂರ ಒಳಗೊಂಡ ತಂಡವನ್ನು ರಚಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.