ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯ: ಕಂದಕೂರ

ಗ್ರಾ.ಪಂ ಪ್ರತಿನಿಧಿಗಳಿಗೆ ಸಾಕ್ಷರ ಸನ್ಮಾನ ತರಬೇತಿ ಕಾರ್ಯಾಗಾರ
Published : 29 ಆಗಸ್ಟ್ 2024, 14:27 IST
Last Updated : 29 ಆಗಸ್ಟ್ 2024, 14:27 IST
ಫಾಲೋ ಮಾಡಿ
Comments

ರೋಣ: ಗ್ರಾಮ ಪಂಚಾಯಿತಿಗಳ ಅನಕ್ಷರಸ್ಥ ಪ್ರತಿನಿಧಿಗಳನ್ನು ಓದು, ಬರಹ ಮತ್ತು ಲೆಕ್ಕಾಚಾರಗಳಲ್ಲಿ ಕ್ರಿಯಾತ್ಮಕ ಸಾಕ್ಷರಸ್ಥರನ್ನಾಗಿಸುವ ಉದ್ದೇಶದಿಂದ ಸರ್ಕಾರವು ಜಾರಿಗೆ ತಂದಿರುವ ಸಾಕ್ಷರ ಸನ್ಮಾನ ತರಬೇತಿ ಕಾರ್ಯಾಗಾರದ ಸದುಪಯೋಗ ಪಡೆಯಬೇಕು ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ (ನರೇಗಾ) ಚಂದ್ರಶೇಖರ ಬಿ. ಕಂದಕೂರ ತಿಳಿಸಿದರು.

ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು ವತಿಯಿಂದ ಪಂಚಾಯಿತಿ ಚುನಾಯಿತ ಅನಕ್ಷರಸ್ಥ ಪ್ರತಿನಿಧಿಗಳಿಗೆ ಸಾಕ್ಷರತಾ ಕೌಶಲಗಳನ್ನು ನೀಡುವ ಸಾಕ್ಷರ ಸನ್ಮಾನ ತರಬೇತಿದಾರರಿಗೆ ರೋಣ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಗುರುವಾರ ಹಮ್ಮಿಕೊಂಡಿದ್ದ 3 ದಿನಗಳ ಸಾಕ್ಷರ ಸನ್ಮಾನ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಬೋಧಕರು, ಮತ್ತು ಅರಿವು ಕೇಂದ್ರದ ಮೇಲ್ವಿಚಾರಕರು ತರಬೇತಿ ಕಾರ್ಯಾಗಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು, ಚುನಾಯಿತ ಪ್ರತಿನಿಧಿಗಳು ಚನ್ನಾಗಿ ಶಿಕ್ಷಣ ಕಲಿತು, ಗ್ರಾಮದ ಸಭೆಗಳಲ್ಲಿ ಕ್ರಿಯಾತ್ಮಕವಾಗಿ ಭಾಗವಹಿಸಿ, ಅಭಿವೃದ್ಧಿಗೆ ಶ್ರಮಿಸಿ ಎಂದರು.

ತಾ.ಪಂ. ವ್ಯವಸ್ಥಾಪಕರಾದ ದೇವರಾಜ ಸಜ್ಜನಶೆಟ್ಟರ, ‘ಮಹಿಳೆ ಸಾಕ್ಷರತೆ ಪಡೆದರೆ ತನ್ನ ಮಕ್ಕಳು, ಕುಟುಂಬವನ್ನು ವಿದ್ಯಾವಂತರನ್ನಾಗಿ ಮಾಡಬಹುದು’ ಎಂದು ಹೇಳಿದರು.

ವಿಷಯ ನಿರ್ವಾಹಕರಾದ ಎಚ್.ಕೆ.ದೇಸಾಯಿ, ತಜ್ಞ ಸಂಪನ್ಮೂಲ ವ್ಯೆಕ್ತಿಗಳಾದ ಬಿ.ಆರ್. ಪಟ್ಟಣಶೆಟ್ಟರ ಹಾಗೂ ಆರ್.ಬಿ.ಸೋಮನಕಟ್ಟಿ, ಎ.ಎನ್.ಎಸ್.ಎಸ್.ಐ ಆರ್.ಡಿ ಸಂಸ್ಥೆಯ ತಾಲ್ಲೂಕು ಸಂಯೋಜಕ ಶರಣಪ್ಪ ಕೊತಬಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT